ದೂರುದಾರನ ಬಳಿ ಲಂಚಕ್ಕೆ ಬೇಡಿಕೆ | ಸರ್ಕಲ್ ಇನ್ಸ್‌ಪೆಕ್ಟರ್ ಅರೆಸ್ಟ್
ಹೈದರಾಬಾದ್: ದೂರುದಾರರ ಬಳಿ ಭಾರೀ ಮೊತ್ತದ ಲಂಚಕ್ಕೆ ಬೇಡಿಕೆ ನೀಡಿದ ಆರೋಪದ ಮೇಲೆ ಕಾಮರೆಡ್ಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಜಗದೀಶ್ ಎಂಬಾತನನ್ನು ಬಂಧಿಸಲಾಗಿದೆ.
ದೂರುದಾರರ ಬಳಿ ಇನ್ಸ್‌ಪೆಕ್ಟರ್ ಜಗದೀಶ್ ತನ್ನ ಸಹಚರ ಎಂ.ಸುಜಯ್ ಮೂಲಕ 5 ಲಕ್ಷ ರೂ. ಬೇಡಿಕೆ ಇಟ್ಟಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದ್ದು, ಬಂಧನದ ನಂತರ ಜಗದೀಶ್ ಮತ್ತು ಸುಜಯ್ ಅವರನ್ನು ಕರೀಂನಗರ ವಿಶೇಷ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು
ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸ್ಥಳಗಳಲ್ಲಿ ವಿಚಾರಣೆ ನಡೆಯುತ್ತಿದೆ. ಇನ್ಸ್‌ಪೆಕ್ಟರ್ ಜಗದೀಶ್ ನ ಲಂಚಾವತಾರ ಒಂದೊಂದಾಗಿ ಬೆಳಕಿಗೆ ಬರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.