ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆ | ಕುಮಾರಸ್ವಾಮಿ ಹೇಳಿಕೆ - Mahanayaka

ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆ | ಕುಮಾರಸ್ವಾಮಿ ಹೇಳಿಕೆ

kumaraswamy
02/05/2021

ಬೆಂಗಳೂರು: ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮಣಿಸಲಾಗದು ಎನ್ನುವ ಸಂದೇಶ ಐದು ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಹೊರ ಬಿದ್ದಿದೆ. ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಬಸವಕಲ್ಯಾಣದಲ್ಲಿ ಜೆಡಿಎಸ್‌ ಅಭ್ಯರ್ಥಿಗೆ ಮತ ನೀಡಿದ ಎಲ್ಲರಿಗೂ ಧನ್ಯವಾದ ಹೇಳಿರುವ ಕುಮಾರಸ್ವಾಮಿ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಗೆಲುವನ್ನು ಹಾಡಿ ಹೊಗಳಿದರು.

ಅಧಿಕಾರ ದುರ್ಬಳಕೆಯ, ಅಪಪ್ರಚಾರದ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆಯಂತೆ ಹೊರಹೊಮ್ಮಿದ್ದಾರೆ  ಎಂದು ಅವರು ಬಣ್ಣಿಸಿದರು.

ಪ್ರಾದೇಶಿಕ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ರುಜುವಾತುಪಡಿಸಿದ್ದಾರೆ. ಯಾವ ಅಧಿಕಾರ, ಹಣದ ದರ್ಪ, ಒತ್ತಡ ತಂತ್ರಗಳು, ಕುತಂತ್ರಗಳು, ಅಪಪ್ರಚಾರಗಳು ಪ್ರಾದೇಶಿಕ ಅಸ್ಮಿತೆಯನ್ನು ಚಿವುಟಿಹಾಕಲಾರವು. ಜನಮನಗೆದ್ದ ಪ್ರಾದೇಶಿಕ ಪಕ್ಷದ ನಾಯಕರನ್ನು ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇವತ್ತಿನ ಫಲಿತಾಂಶವೇ ನಿದರ್ಶನ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ