ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು - Mahanayaka
9:32 AM Thursday 16 - October 2025

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು

accident copy
23/01/2022

ಕೊಪ್ಪಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಶಹಪೂರ ಗ್ರಾಮದ ಬಳಿ ಸಂಭವಿಸಿದೆ.


Provided by

ಮೃತರನ್ನು ಶಹಪೂರ ಗ್ರಾಮದ ಬೋಜಪ್ಪ (28) ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಅಪಘಾತದ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಟೋಲ್ ಗೇಟ್ ಸಂಸ್ಥೆ ವಿರುದ್ಧ ಶಹಪೂರ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಟೋಲ್ ಗೇಟ್ ಮುಂದೆ ಶವವಿಟ್ಟು ಪ್ರತಿಭಟನೆಗೆ ಮುಂದಾಗಿದ್ದರು. ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಹೆದ್ದಾರಿ ತಡೆಯದಂತೆ ಮನವೊಲಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಸ್ವಯಂ ಘೋಷಿತ ಸಂವಿಧಾನ ಪಂಡಿತ: ಹೆಚ್​​.ಡಿ ಕುಮಾರಸ್ವಾಮಿ

ಪ್ಲಾಸ್ಟಿಕ್‌ ಅಂಗಡಿಗಳು ಬೆಂಕಿಗೆ ಆಹುತಿ: ಇಬ್ಬರು ಸಜೀವ ದಹನ

ಸಾಗರ: 5 ವರ್ಷದ ಮಗು ಹೃದಯಾಘಾತದಿಂದ ಸಾವು

ಕೊವಿಡ್ ನಿಯಮ: ತನ್ನ ಮದುವೆಯನ್ನೇ ರದ್ಧುಗೊಳಿಸಿದ ನ್ಯೂಜಿಲೆಂಡ್‌ ಪ್ರಧಾನಿ

ಇತ್ತೀಚಿನ ಸುದ್ದಿ