ಡಿವೈಎಸ್ ಪಿಯ ರಾಸಲೀಲೆ ವಿಡಿಯೋ ವೈರಲ್: ದೂರು ಕೊಡಲು ಬಂದಿದ್ದ ಮಹಿಳೆ ಜೊತೆಗೆ ರಾಸಲೀಲೆ

dysp
03/01/2025

ತುಮಕೂರು:  ಗೃಹ ಸಚಿವರ ಜಿಲ್ಲೆಯಲ್ಲೇ ಚಪಲಚನ್ನಿಗ ಡಿವೈಎಸ್ ಪಿಯೊಬ್ಬ  ದೂರು ಕೊಡಲು ಬಂದಿದ್ದ ಮಹಿಳೆ ಜೊತೆ ಕಚೇರಿಯಲ್ಲೇ ರಾಸಲೀಲೆ ನಡೆಸಿರುವ ವಿಡಿಯೋವೊಂದು  ಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪ ಕಚೇರಿಯಲ್ಲೇ ಮಹಿಳೆ ಜೊತೆ ರಾಸಲೀಲೆ ನಡೆಸಿ ಸಿಕ್ಕಿಬಿದ್ದಿದ್ದು,  ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಮಹಿಳೆಯನ್ನೇ ಪುಸಲಾಯಿಸಿ ಡಿವೈಎಸ್ ಪಿ ರಾಸಲೀಲೆ ನಡೆಸಿರುವ ಘಟನೆ ನಡೆದಿದೆ.

ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು, ಮಾತುಕತೆ ನಡೆಸಲು ಡಿವೈಎಸ್ ಪಿ ಕಚೇರಿಗೆ ಬಂದಿದ್ರು.  ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್ ಪಿ ರಾಮಚಂದ್ರಪ್ಪ, ಶೌಚಾಲಯದ ಬಳಿ ಕರೆದುಕೊಂಡು ಹೋಗಿ ರಾಸಲೀಲೆ ನಡೆಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಈ ಘಟನೆಯಿಂದ ರಾಜ್ಯ ಗೃಹ ಇಲಾಖೆ ತಲೆತಗ್ಗಿಸುವಂತಾಗಿದೆ.  ಅದರಲ್ಲೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರಿನಲ್ಲೇ ಇಂತಹದ್ದೊಂದು ಘಟನೆ ನಡೆದಿದ್ದು, ಪೊಲೀಸ್ ಇಲಾಖೆಯ ಘನತೆಯನ್ನೇ ಕಳೆಯುತ್ತಿರುವ ಡಿವೈಎಸ್ ಪಿ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿ ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/Ci8F6ckDmAbCBQyqgLqOPx

ಇತ್ತೀಚಿನ ಸುದ್ದಿ

Exit mobile version