ಅಜರ್ ಬೈಜಾನ್ ವಿಮಾನ ದುರಂತ ಕೇಸ್: ಮತ್ತಷ್ಟು ಭಯಾನಕ ಮಾಹಿತಿ ಬಯಲು
ಕಝಾಕಿಸ್ತಾನದ ಅಕ್ಟೌ ನಗರದ ಬಳಿ ತುರ್ತು ಭೂಸ್ಪರ್ಶ ಮಾಡುವ ವೇಳೆವಿಮಾನ ಪತನಗೊಂಡು ಕನಿಷ್ಠ 42 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ 20 ಕ್ಕೂ ಹೆಚ್ಚು ಜನರು ಬದುಕುಳಿದ್ದಾರೆ. ವಿಮಾನವು ಜ್ವಾಲೆ ತುತ್ತಾಗುವ ಮೊದಲು ಎತ್ತರವನ್ನು ಕಳೆದುಕೊಳ್ಳುವ ಮತ್ತು ವೇಗವಾಗಿ ಇಳಿಯುವ ಕ್ಷಣವನ್ನು ವೀಡಿಯೊದಲ್ಲಿ ದಾಖಲಾಗಿದೆ.
ಅಜರ್‌ಬೈಜಾನ್ ಏರ್‌ಲೈನ್ಸ್ ಫ್ಲೈಟ್ ಜೆ2-8243 ಬಾಕುದಿಂದ ರಷ್ಯಾದ ಗ್ರೋಜ್ನಿಗೆ ತೆರಳುತ್ತಿತ್ತು. ಆದರೆ, ಗ್ರೋಜ್ನಿಯಲ್ಲಿ ಮಂಜಿನಿಂದಾಗಿ ಮಾರ್ಗವನ್ನು ಬದಲಾಯಿಸಲಾಯಿತು ಎಂದು ರಷ್ಯಾದ ಸುದ್ದಿ ಸಂಸ್ಥೆಗಳು ವರದಿ ಮಾಡಿದೆ. ಅಂತಾರಾಷ್ಟ್ರೀಯ ಮಾಧ್ಯಮಗಳ ಪ್ರಕಾರ, ವಿಮಾನ ಅಪಘಾತದಲ್ಲಿ 42 ಜನರು ಸಾವನ್ನಪ್ಪಿದ್ದಾರೆ ಎಂದು ಕಝಾಕಿಸ್ತಾನ್ ತುರ್ತು ಸಚಿವಾಲಯ ತಿಳಿಸಿದೆ.
110 ರಿಂದ 105 ಪ್ರಯಾಣಿಕರು ಮತ್ತು ಐದು ಸಿಬ್ಬಂದಿ ವಿಮಾನದಲ್ಲಿದ್ದರು ಎಂದು ಕಝಕ್ ಮಾಧ್ಯಮವು ಆರಂಭದಲ್ಲಿ ವರದಿ ಮಾಡಿದೆ.
ವಿಮಾನ ಪತನವಾಗುತ್ತಿದ್ದಂತೆ ಸ್ಥಳದಲ್ಲಿಯೇ ಹೊಗೆಯ ಏರುತ್ತಿರುವುದು ಕಂಡು ಬಂದಿದೆ. ವಿಮಾನವು ತೆರೆದ ಮೈದಾನಕ್ಕೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿತು.
ತುರ್ತು ಸೇವೆಗಳು ಅಪಘಾತದ ಸ್ಥಳದಲ್ಲಿ ಬೆಂಕಿಯನ್ನು ನಂದಿಸಿದವು, ಕಝಾಕಿಸ್ತಾನ್‌ನ ತುರ್ತು ಸಚಿವಾಲಯವು ಬದುಕುಳಿದವರನ್ನು ವೈದ್ಯಕೀಯ ಸಹಾಯಕ್ಕಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಹೇಳಿದರು.
ಅಕ್ಟೌ ಬಳಿ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಜರ್‌ಬೈಜಾನ್ ಏರ್‌ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj




























