ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಕೈಗೆ ಸಿಕ್ಕಿ ಬಿದ್ದ ಇ.ಡಿ. ಅಧಿಕಾರಿ!
08/08/2024
ನವದೆಹಲಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಯೊಬ್ಬರನ್ನು ಕೇಂದ್ರ ತನಿಖಾ ದಳ(CBI) ರೆಡ್ ಹ್ಯಾಂಡ್ ಆಗಿ ಬಂಧಿಸಿದ ಘಟನೆ ದೆಹಲಿಯ ಲಜಪತ್ ನಗರ ಪ್ರದೇಶದಲ್ಲಿ ನಡೆದಿದೆ.
ಸಂದೀಪ್ ಸಿಂಗ್ ಯಾದವ್ ಬಂಧಿತ ಇ.ಡಿ. ಅಧಿಕಾರಿಯಾಗಿದ್ದಾನೆ. ಈತ ಪ್ರಕರಣವೊಂದರ ವಿಚಾರವಾಗಿ ಆಭರಣ ವ್ಯಾಪಾರಿಯಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ದೆಹಲಿಯ ಲಜಪತ್ ನಗರ ಪ್ರದೇಶದಲ್ಲಿ ಇಡಿ ಅಧಿಕಾರಿ ಸಂದೀಪ್ ಸಿಂಗ್ ಯಾದವ್ ಸಿಬಿಐ ಅಧಿಕಾರಿಗಳ ಬಲೆಗೆ ಬಿದ್ದಿರುವುದನ್ನು ಸಿಬಿಐ ಹಿರಿಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth