11:13 AM Wednesday 20 - August 2025

ಈ ಒಗ್ಗಟ್ಟು ಎಷ್ಟು ದಿನ ಇರುತ್ತೆ ನೋಡೋಣ: ಸಿ.ಟಿ.ರವಿ ಅಸಮಾಧಾನ

c t ravi
04/08/2022

ಚಿಕ್ಕಮಗಳೂರು: ಗುಡ್ಡ ಕುಸಿದು ಅತಿವೃಷ್ಟಿಯಿಂದ ಹತ್ತಾರು ಜನ ಪ್ರಾಣಕಳೆದುಕೊಂಡಿದ್ದಾರೆ. ಈಗ 100 ಕೋಟಿ ಖರ್ಚು ಮಾಡಿದ್ದಾರೆ. ಅದರಲ್ಲಿ ಜನರಿಗೆ ಬದುಕು ಕಟ್ಟಿಕೊಡಬಹುದಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅಮೃತ ಮಹೋತ್ಸವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, 100 ಕೋಟಿ ಖರ್ಚು ಮಾಡಿದ್ದಾರೆ. ಅದರಲ್ಲಿ ಜನರಿಗೆ ಬದುಕು ಕಟ್ಟಿಕೊಡಬಹುದಿತ್ತು. ಆ ಜನ ಸಾಯುವವರೆಗೂ ಇವರ ಫೋಟೋ ಇಟ್ಟುಕೊಂಡು ಪೂಜೆ ಮಾಡೋರು. ಸಂವೇದನಾಶೀಲತೆ ಇಲ್ಲದ ಸ್ಥಿತಿಗೆ ಕಾಂಗ್ರೆಸ್ಸಿನ ಎಲ್ಲಾ ನಾಯಕರು ಬಂದಿರೋದು ದುರಾದೃಷ್ಟ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಮೃತ ಮಹೋತ್ಸವದ ಮೂಲಕ ಕೈನಾಯಕರ ಒಗ್ಗಟ್ಟು ಪ್ರದರ್ಶನದ ಬಗ್ಗೆ ಮಾತನಾಡಿದ ಅವರು, ಒಗ್ಗಟ್ಟು ಎಷ್ಟು ದಿನ ಇರುತ್ತೆ ಅನ್ನೋದು ಪ್ರಶ್ನಾರ್ಥಕ ಸಂಗತಿ. ಇಂದು ಕೈಹಿಡಿದು ಒಗ್ಗಟ್ಟು ತೋರಿಸಿದರು, ಇದೇ ಜನ ಪರಮೇಶ್ವರ್ ಸೋಲಿಸಿದ್ರು. ಒಗ್ಗಟ್ಟು ಎಷ್ಟು ದಿನ ಇರುತ್ತೆ ಅನ್ನೋದನ್ನು ನೋಡೋಣ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version