ದೆಹಲಿಯಲ್ಲಿ ಮತ್ತೊಮ್ಮೆ ಕಂಪಿಸಿದ ಭೂಮಿ: ಭಯಭೀತರಾದ ಜನ - Mahanayaka

ದೆಹಲಿಯಲ್ಲಿ ಮತ್ತೊಮ್ಮೆ ಕಂಪಿಸಿದ ಭೂಮಿ: ಭಯಭೀತರಾದ ಜನ

haryana
15/10/2023


Provided by

ನವದೆಹಲಿ: ದೆಹಲಿ—ಎನ್ ಸಿಆರ್ ನಲ್ಲಿ ಭಾನುವಾರ 3.1 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.

ಭೂಕಂಪನದಿಂದ ಯಾವುದೇ ಹಾನಿಯಾಗಿರುವ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಸಂಜೆ 4ರ ಸುಮಾರಿಗೆ ಈ ಭೂಕಂಪನ ಸಂಭವಿಸಿದೆ. ಹರ್ಯಾಣದ ಫರಿದಾಬಾದ್ ನಲ್ಲಿ 9 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ.

15 ದಿನಗಳ ಅಂತರದಲ್ಲಿ ಸಂಭವಿಸಿದ ಎರಡನೇ ಭೂಕಂಪನ ಇದಾಗಿದೆ. ಅಕ್ಟೋಬರ್ 3ರಂದು ದೆಹಲಿ—ಎನ್ ಸಿ ಆರ್ ಪ್ರದೇಶದಲ್ಲಿ ಭೂಕಂಪನ ಸಂಭವಿಸಿತ್ತು.

ಇತ್ತೀಚಿನ ಸುದ್ದಿ