ನಡುಗಿದ ಭೂಮಿ: ಹರಿಯಾಣದ ಸೋನಿಪತ್ ಪ್ರದೇಶದಲ್ಲಿ 3.0 ತೀವ್ರತೆಯ ಭೂಕಂಪ

ಹರಿಯಾಣದ ಸೋನಿಪತ್ ನಲ್ಲಿ ಭಾನುವಾರ ಮುಂಜಾನೆ ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಪ್ರಕಾರ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಭೂಕಂಪನ ಸಂಭವಿಸಿದೆ.
ಭೂಕಂಪದ ಕೇಂದ್ರಬಿಂದು ಸೋನಿಪತ್‌ನಲ್ಲಿತ್ತು ಮತ್ತು 29.15 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 76.97 ಡಿಗ್ರಿ ಪೂರ್ವ ರೇಖಾಂಶದಲ್ಲಿ 5 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ಎನ್ಸಿಎಸ್ ತಿಳಿಸಿದೆ.
ಈವರೆಗೂ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಪಶ್ಚಿಮ ನೇಪಾಳದಲ್ಲಿ 6.2 ತೀವ್ರತೆಯ ಭೂಕಂಪನ ಸಂಭವಿಸಿದ ನಂತರ ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಪ್ರಬಲ ನಡುಕ ಉಂಟಾಗಿದೆ. ದೇಶವನ್ನು ಅಪ್ಪಳಿಸಿದ ಸತತ ಭೂಕಂಪಗಳಲ್ಲಿ ಇದು ಅತ್ಯಂತ ಪ್ರಬಲವಾಗಿದೆ.
ಇದಕ್ಕೂ ಮುನ್ನ ಅಕ್ಟೋಬರ್ 15 ರಂದು ಹರಿಯಾಣದ ಫರಿದಾಬಾದ್ ನಲ್ಲಿ 3.1 ತೀವ್ರತೆಯ ಭೂಕಂಪನ ಸಂಭವಿಸಿತ್ತು.
ಇದಕ್ಕೂ ಮೊದಲು, ಅಕ್ಟೋಬರ್ 3 ರಂದು ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಬಲವಾದ ನಡುಕದ ಅನುಭವವಾಗಿತ್ತು. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.2ರಷ್ಟಿತ್ತು.