ಭ್ರಷ್ಟ ಅಂದರ್: 20 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಡಿ ಸಹಾಯಕ ನಿರ್ದೇಶಕ ಅರೆಸ್ಟ್

08/08/2024

20 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಜಾರಿ ನಿರ್ದೇಶನಾಲಯದ (ಇಡಿ) ಸಹಾಯಕ ನಿರ್ದೇಶಕರೊಬ್ಬರನ್ನು ದೆಹಲಿಯಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಇ.ಡಿ ಅಧಿಕಾರಿಯನ್ನು ಸಂದೀಪ್ ಯಾದವ್ ಎಂದು ಗುರುತಿಸಲಾಗಿದೆ. ಜ್ಯುವೆಲ್ಲರಿ ಮಾಲೀಕರೊಬ್ಬರಿಂದ ಲಂಚ ಪಡೆಯುತ್ತಿದ್ದಾಗ ಅವರನ್ನು ಬಂಧಿಸಲಾಗಿದೆ.

ಇಡಿಯು ಜ್ಯುವೆಲ್ಲರಿ ಮಾಲೀಕನ ಮಗನ ವಿರುದ್ಧ ದಾಖಲಿಸಿರುವ ಪ್ರಕರಣವೊಂದರಿಂದ ಅವರಿಗೆ ರಿಲೀಫ್ ನೀಡಲು ಅಧಿಕಾರಿ ಲಂಚದ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.

ಈ ಸಂಬಂಧ ದೂರು ಬಂದಿದ್ದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಸಿಬಿಐ, ರೆಡ್ ಹ್ಯಾಂಡಾಗಿ ಅಧಿಕಾರಿಯನ್ನು ಬಂಧಿಸಿದೆ.

2023ರ ಆಗಸ್ಟ್‌ನಲ್ಲಿ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉದ್ಯಮಿ ಅಮನ್ ಧಲ್ ರನ್ನು ಪಾರು ಮಾಡಲು ₹5 ಕೋಟಿ ಲಂಚ ಪಡೆದಿದ್ದ ಆರೋಪದ ಮೇಲೆ ಇ.ಡಿಯ ಸಹಾಯಕ ನಿರ್ದೇಶಕ ಸೇರಿ 6 ಅಧಿಕಾರಿಗಳನ್ನು ಸಿಬಿಐ ಬಂಧಿಸಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version