ಇಡಿ ಭರ್ಜರಿ ಬೇಟೆ: ಪಿಎಫ್ ಐ ನಾಯಕರ ಮನೆ, ಕಚೇರಿಗಳ ಮೇಲೆ ದಾಳಿ
ತಿರುವನಂತಪುರ: ಪಿಎಫ್ ಐ ನಾಯಕರ ಮನೆಗಳ ಮೇಲೆ ಇಡಿ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿದ್ದು, ಪೆನ್ ಡ್ರೈವ್, ಲ್ಯಾಪ್ ಟಾಪ್ ಗಳು ಸೇರಿದಂತೆ ವಿವಿಧ ದಾಖಲೆಗಳನ್ನು ವಶಪಡಿಸಿಕೊಂಡಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ ಐ) ರಾಷ್ಟ್ರೀಯ ಅಧ್ಯಕ್ಷ ಒಎಂಎ ಸಲಾಮ್, ರಾಷ್ಟ್ರೀಯ ಕಾರ್ಯದರ್ಶಿ ನಸರುದ್ದೀನ್, ಅನೀಸ್ ಅಹ್ಮದ್ ಇವರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ದಾಳಿ ನಡೆದಿದೆ. ಕರ್ನಾಟಕ, ಬಿಹಾರ, ತಮಿಳುನಾಡು, ಕೇರಳದಲ್ಲಿ ಪಿಎಫ್ ಐ ನಾಯಕರ ಮನೆ, ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ದಾಳಿಯ ವೇಳೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು, ಅಧಿಕಾರಿಗಳ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ ವಿವಿಧ ನಾಯಕರ ಆರ್ಥಿಕ ಚಟುವಟಿಕೆಗಳ ಮೇಲೆ ಇಡಿ ಕಣ್ಣಿರಿಸಿದ್ದು, ಈ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ಹೇಳಲಾಗಿದೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.