ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡು ಸಚಿವ, ಸಂಸದನ ಪುತ್ರನ ಮೇಲೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಮತ್ತು ಅವರ ಪುತ್ರ ಗೌತಮ್ ಸಿಗಮಣಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ನಡೆಸಿದೆ.
ರಾಜ್ಯ ರಾಜಧಾನಿ ಚೆನ್ನೈ ಮತ್ತು ವಿಲ್ಲುಪುರಂನಲ್ಲಿರುವ ತಂದೆ-ಮಗ ನ ಮನೆಗೆ ದಾಳಿ ನಡೆಸಲಾಗಿದೆ.
ಪೊನ್ಮುಡಿ ಅವರು ರಾಜ್ಯ ಗಣಿಗಾರಿಕೆ ಸಚಿವರಾಗಿದ್ದಾಗ (2007 ಮತ್ತು 2011 ರ ನಡುವೆ) ಅಕ್ರಮಗಳಿಗೆ ಮನಿ ಲಾಂಡರಿಂಗ್ ಪ್ರಕರಣ ನಡೆದಿದೆ ಮತ್ತು ಕ್ವಾರಿ ಪರವಾನಗಿ ಷರತ್ತುಗಳನ್ನು ಉಲ್ಲಂಘಿಸಿದ ಆರೋಪಗಳಿವೆ. ಇದರಿಂದಾಗಿ ಬೊಕ್ಕಸಕ್ಕೆ ಸುಮಾರು 28 ಕೋಟಿ ರೂಪಾಯಿ ನಷ್ಟ ಆಗಿದೆ. ಹಿರಿಯ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಾರಿಗೆ ಸಚಿವ ಸೆಂಥಿಲ್ ಬಾಲಾಜಿ ವಿರುದ್ಧ ಜಾರಿ ನಿರ್ದೇಶನಾಲಯ ಇತ್ತೀಚೆಗೆ ಇದೇ ರೀತಿಯ ಕ್ರಮವನ್ನು ಪ್ರಾರಂಭಿಸಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw