6:31 AM Wednesday 28 - January 2026

ಇದು ಅಭಿಮಾನಕ್ಕೆ ಮಾದರಿ ಆಗದಿರಲಿ; ಅಭಿಮಾನಿಯ ಆತ್ಮಹತ್ಯೆಗೆ ಯಶ್ ಪ್ರತಿಕ್ರಿಯೆ

18/02/2021

ಬೆಂಗಳೂರು: ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು.. ಜೀವನ.. ಹೆಮ್ಮೆ.. ಆದರೆ ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆಪಡಲು ಸಾಧ್ಯವೇ… ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ.. ಕೋಡಿ ದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ… ಓಂ ಶಾಂತಿ… ಎಂದು ರಾಕಿಂಗ್ ಸ್ಟಾರ್ ಯಶ್ ಟ್ವೀಟ್ ಮಾಡಿದ್ದಾರೆ.

ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದ ರಾಮಕೃಷ್ಣ(25) ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ರಾಕಿಂಗ್ ಸ್ಟಾರ್ ಯಶ್ ಈ ರೀತಿ ಟ್ವೀಟ್ ಮಾಡಿದ್ದಾರೆ. ತನ್ನ ಡೆತ್ ನೋಟ್ ನಲ್ಲಿ, ನಾನು ಸಿದ್ದರಾಮಯ್ಯನವರ ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರ ಅಭಿಮಾನಿ ನನ್ನ ಅಂತ್ಯ ಕ್ರಿಯೆಯಲ್ಲಿ ಇವರು ಭಾಗವಹಿಸಬೇಕು ಇದು ನನ್ನ ಕೊನೆಯ ಆಸೆ ಎಂದು ರಾಮಕೃಷ್ಣ  ಬರೆದಿದ್ದರು.

ಇನ್ನೂ ಮಾಜಿ ಸಿಎಂ ಸಿದ್ದರಾಮಯ್ಯ ಯುವಕನ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಂತ್ಯಸಂಸ್ಕಾರಕ್ಕೆ ಹೋಗಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಟ್ವೀಟ್ ಮಾಡಿದ್ದು, ಇದು ಅಭಿಮಾನಕ್ಕೆ ಮಾದರಿ ಆಗುವುದು ಬೇಡ ಎಂದು ಹೇಳಿದ್ದಾರೆ.

ಅಭಿಮಾನಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರವೃತ್ತಿ ಹೆಚ್ಚಾದರೆ, ಅದು ಸಮಾಜದಲ್ಲಿ ಉತ್ತಮ ಬೆಳವಣಿಗೆ ಅಲ್ಲ ಎಂದು ಪರೋಕ್ಷವಾಗಿ ರಾಕಿಂಗ್ ಸ್ಟಾರ್ ಯಶ್ ಸಂದೇಶ ನೀಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version