ಇದು ಧರ್ಮ-ಅಧರ್ಮದ ಯುದ್ಧ | ಈ ಚುನಾವಣೆ ಒಬ್ಬ ವ್ಯಕ್ತಿಯ ಸ್ವಾರ್ಥಕ್ಕಾಗಿ ನಡೆಯುತ್ತಿದೆ | ಡಿ.ಕೆ.ಶಿವಕುಮಾರ್ ವಾಗ್ದಾಳಿ
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆ ಕೇವಲ ಚುನಾವಣೆಯಲ್ಲ ಇದೊಂದು ಧರ್ಮ ಯುದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ,ಕೆ,ಶಿವಕುಮಾರ್ ಹೇಳಿದ್ದು, ಈ ಕ್ಷೇತ್ರವನ್ನು ನೀಚ ರಾಜಕಾರಣಿಯಿಂದ ಮುಕ್ತಗೊಳಿಸಬೇಕು ಎಂದು ಹೇಳಿದರು.
ಕ್ಷೇತ್ರದ ಜಾಲಹಳ್ಳಿ ವಾರ್ಡ್ ನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಬೃಹತ್ ರೋಡ್ ಶೋ ನಡೆಸಿ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸಲು ಜನರ ಕಷ್ಟಕ್ಕೆ ಧ್ವನಿಯಾಗಲು ಕಾಂಗ್ರೆಸ್ ಪಕ್ಷ ಯುವ, ವಿದ್ಯಾವಂತ ಹಾಗೂ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಎಂದು ಹೇಳಿದರು.
ಈ ಚುನಾವಣೆ ರಾಜಕಾರಣದ ಧರ್ಮ ಹಾಗೂ ಅಧರ್ಮದ ನಡುವಣ ಯುದ್ಧ. ಒಂದು ಪಕ್ಷದಲ್ಲಿ ಗೆದ್ದು, ಆ ಪಕ್ಷ ಹಾಗೂ ಮತದಾರರನ್ನು ಕೇಳದೇ ಅವರು ಕೊಟ್ಟ ಮತ ಹಾಗೂ ಸ್ಥಾನವನ್ನು ಮಾರಿಕೊಂಡಿರುವುದು ರಾಜಕಾರಣದ ಅಧರ್ಮ. ಒಂದು ವ್ಯಕ್ತಿಯ ಸ್ವಾರ್ಥಕ್ಕಾಗಿ ಇಂದು ಈ ಚುನಾವಣೆಯ ನಡೆಯುತ್ತಿದೆ ಎಂದು ಹೇಳಿದರು.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.