ಮಳೆ ಸಂದರ್ಭದಲ್ಲಿ ಆದ ರಜೆ ಭರ್ತಿಗೆ ಕ್ರಮ: ಶನಿವಾರ ಇಡೀದಿನ ತರಗತಿ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ - Mahanayaka
12:15 AM Saturday 23 - August 2025

ಮಳೆ ಸಂದರ್ಭದಲ್ಲಿ ಆದ ರಜೆ ಭರ್ತಿಗೆ ಕ್ರಮ: ಶನಿವಾರ ಇಡೀದಿನ ತರಗತಿ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ

dakshina kannada
30/08/2023


Provided by

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರಗಳಂದು ಇಡೀ ದಿನ ಶಾಲೆ ನಡೆಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ.

ಜುಲೈ ತಿಂಗಳಲ್ಲಿ ಸುರಿದ ಅತೀ ಹೆಚ್ಚು ಮಳೆಯಿಂದಾಗಿ ದ.ಕ. ಜಿಲ್ಲೆಯ ಶಾಲೆಗಳಿಗೆ ದ.ಕ. ಜಿಲ್ಲಾಧಿಕಾರಿಯವರ ನಿರ್ದೇಶನದಂತೆ 7 ದಿನ ರಜೆ ಸಾರಲಾಗಿತ್ತು. ಈ ರಜಾ ದಿನಗಳಿಂದ ವಿದ್ಯಾರ್ಥಿಗಳಿಗೆ ಆದ ತರಗತಿ ನಷ್ಟವನ್ನು ಭರ್ತಿ ಮಾಡಲು 14 ಶನಿವಾರಗಳಂದು ಇಡೀ ದಿನ ತರಗತಿ ನಡೆಸಲು ನಿರ್ಧರಿಸಲಾಗಿದೆ ಎಂದು ಉಪನಿರ್ದೇಶಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ