ಈಗ ಸರ್ಕಾರಕ್ಕೆ ಕೊಳೆತ ಮೊಟ್ಟೆಯಲ್ಲಿ ಹೊಡೆಯಬೇಕೇ?: ತೇಜಸ್ವಿ ಸೂರ್ಯ ಹೇಳಿಕೆಗೆ ಸಿದ್ದು ತಿರುಗೇಟು - Mahanayaka

ಈಗ ಸರ್ಕಾರಕ್ಕೆ ಕೊಳೆತ ಮೊಟ್ಟೆಯಲ್ಲಿ ಹೊಡೆಯಬೇಕೇ?: ತೇಜಸ್ವಿ ಸೂರ್ಯ ಹೇಳಿಕೆಗೆ ಸಿದ್ದು ತಿರುಗೇಟು

siddaramaiha
30/07/2022


Provided by

ADS

ಮೈಸೂರು: ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ ಆಡಳಿತ ವ್ಯವಸ್ಥೆ ಹದಗೆಟ್ಟಿದ್ದು, ಮಂಗಳೂರಿನ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕಾಂಗ್ರೆಸ್ ಸರ್ಕಾರವಿದ್ದಿದ್ದರೆ, ಕಲ್ಲು ಹೊಡೆಯಬಹುದಿತ್ತು ಎನ್ನುವ ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ,   ಒಬ್ಬ ಸಂಸದ ಮಾತನಾಡುವ ಮಾತೇನ್ರಿ ಇದು? ಈಗ ಸರ್ಕಾರವನ್ನು ಕೊಳೆತ ಮೊಟ್ಟೆಯಲ್ಲಿ ಹೊಡೆಯಬೇಕೋ ಚಪ್ಪಲಿಯಲ್ಲಿ ಹೊಡೆಯಬೇಕೋ ಎಂದು ಪ್ರಶ್ನಿಸಿದರು.  ಆದರೆ, ಚಪ್ಪಲಿಯಲ್ಲಿ ಹೊಡೆಯ ಬೇಕು ಎನ್ನುವ ಪದ ಬಳಕೆ ಸರಿಯಲ್ಲ ಎಂದು ಸ್ಥಳದಲ್ಲೇ ತಮ್ಮ ಹೇಳಿಕೆ ವಾಪಸ್ ಪಡೆದುಕೊಂಡರು.

ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರದ ಅಗತ್ಯವಿದೆಯಾ? ಉತ್ತರ ಪ್ರದೇಶದಷ್ಟು ರಾಜ್ಯ ಬದಲಾಗಿದೆಯೇ? ಉತ್ತರ ಪ್ರದೇಶದ ಸ್ಥಿತಿ ರಾಜ್ಯದಲ್ಲಿ ಸೃಷ್ಟಿಯಾಗಿದೆ ಎಂದು ಬಿಜೆಪಿ ಒಪ್ಪಿಕೊಂಡಂತಾಗಿದೆ ಎಂದು ಅವರು ಇದೇ ವೇಳೆ ಸರ್ಕಾರವನ್ನು ತರಾಟೆಗೆತ್ತಿಕೊಂಡರು.

ADS

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ