ಕರಾವಳಿಯಲ್ಲಿ ಏಪ್ರಿಲ್ 10ರಂದು ಈದುಲ್ ಫಿತ್ರ್ ಆಚರಣೆ - Mahanayaka
3:26 PM Tuesday 16 - September 2025

ಕರಾವಳಿಯಲ್ಲಿ ಏಪ್ರಿಲ್ 10ರಂದು ಈದುಲ್ ಫಿತ್ರ್ ಆಚರಣೆ

eid-ul-fitr
09/04/2024

ಮಂಗಳೂರು: ಚಂದ್ರ ದರ್ಶನದ ಹಿನ್ನೆಲೆ ಕರಾವಳಿಯಲ್ಲಿ ನಾಳೆಯೇ ಈದುಲ್ ಫಿತ್ರ್ ಆಚರಿಸಲು  ಮುಸ್ಲಿಮ್ ಧಾರ್ಮಿಕ ಮುಖಂಡರು ಕರೆ ನೀಡಿದ್ದಾರೆ.


Provided by

ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾಗಿದ್ದು, ಹೀಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್ರ್ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಏಪ್ರಿಲ್ 10ರಂದು ಈದುಲ್ ಫಿತ್ರ್ ಆಚರಿಸಲು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್ ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಕರೆ ನೀಡಿದ್ದಾರೆ.

ಪವಿತ್ರ ರಂಝಾನ್ ಉಪವಾಸ ಆಚರಣೆಯ ಬಳಿಕ ನಾಳೆ ಮುಸ್ಲಿಮರು ಈದುಲ್ ಫಿತ್ರ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲು ಸಜ್ಜಾಗಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ