ದುರಂತ: ಕಮರಿಗೆ ಬಿದ್ದ ಕಾರು: ಒಂದೇ ಕುಟುಂಬದ 8 ಮಂದಿ ಸಾವು
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ದಕ್ಸುಮ್ ಪ್ರದೇಶದಲ್ಲಿ ಶನಿವಾರ ವಾಹನವೊಂದು ಕಮರಿಗೆ ಬಿದ್ದ ಪರಿಣಾಮ ಇಬ್ಬರು ಅಪ್ರಾಪ್ತರು ಸೇರಿದಂತೆ ಒಂದೇ ಕುಟುಂಬದ ಎಂಟು ಮಂದಿ ಸಾವನ್ನಪ್ಪಿದ್ದಾರೆ.
ಮೃತರಲ್ಲಿ ಒಬ್ಬ ಪುರುಷ, ಇಬ್ಬರು ಮಹಿಳೆಯರು ಮತ್ತು ಐದು ಮಕ್ಕಳು ಸೇರಿದ್ದಾರೆ ಮತ್ತು ಅವರು ಕಿಶ್ತ್ವಾರ್ ನಿಂದ ಬರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಅವರು ಪ್ರಯಾಣಿಸುತ್ತಿದ್ದ ಟಾಟಾ ಸುಮೋ ನಿಯಂತ್ರಣ ಕಳೆದುಕೊಂಡು ದಕ್ಸುಮ್ ಬಳಿ ರಸ್ತೆಗೆ ಉರುಳಿದೆ. ಅಪಘಾತದಲ್ಲಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಈ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth