ಅವಘಡ: ವೇಗವಾಗಿ ಚಲಿಸುತ್ತಿದ್ದ ಬಸ್ ಡಿಕ್ಕಿ: ವೃದ್ಧ ಸೈಕ್ಲಿಸ್ಟ್ ಸಾವು

ನಾಗ್ಪುರದ ಹುಡ್ಕೇಶ್ವರ ಪ್ರದೇಶದಲ್ಲಿ ವೇಗವಾಗಿ ಚಲಿಸುತ್ತಿದ್ದ ಶಾಲಾ ಬಸ್ ವೊಂದು ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ 63 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ದುರಂತ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮೃತರನ್ನು ರತ್ನಾಕರ್ ದೀಕ್ಷಿತ್ ಎಂದು ಗುರುತಿಸಲಾಗಿದ್ದು, ಅವರು ಛೋಟಾ ತಾಜ್ಬಾಗ್ನಿಂದ ತುಕ್ಡೋಜಿ ಚೌಕ್ ಕಡೆಗೆ ತೆರಳುತ್ತಿದ್ದಾಗ ಬೆಳಿಗ್ಗೆ 8: 30 ರ ಸುಮಾರಿಗೆ ಬಸ್ ಡಿಕ್ಕಿ ಹೊಡೆದಿದೆ.
ಪರಿಣಾಮವಾಗಿ ದೀಕ್ಷಿತ್ ನೆಲಕ್ಕೆ ಬಿದ್ದು, ತೀವ್ರವಾಗಿ ಗಾಯಗೊಂಡರು. ವಯಸ್ಸಾದ ಸೈಕ್ಲಿಸ್ಟ್ ನಂತರ ಸಾವನ್ನಪ್ಪಿದ್ದಾರೆ.
ಈ ಘಟನೆಯ ನಂತರ ಹುಡ್ಕೇಶ್ವರ ಪೊಲೀಸರು ತ್ವರಿತ ಕ್ರಮ ಕೈಗೊಂಡು ಶಾಲಾ ಬಸ್ ಚಾಲಕನನ್ನು ಬಂಧಿಸಿದ್ದಾರೆ. ತನಿಖೆ ಮುಂದುವರೆದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth