ಮಂಗನ ಕಾಯಿಲೆಗೆ ವೃದ್ಧೆ ಬಲಿ: ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆ - Mahanayaka

ಮಂಗನ ಕಾಯಿಲೆಗೆ ವೃದ್ಧೆ ಬಲಿ: ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆ

monkeypox
26/02/2024

ಉತ್ತರ ಕನ್ನಡ: ಮಂಗನ ಕಾಯಿಲೆ(KFD)ಗೆ ಉತ್ತರ ಕನ್ನಡ ಜಿಲ್ಲೆಯ ವೃದ್ಧೆಯೊಬ್ಬರು ಬಲಿಯಾಗಿದ್ದು, ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.


Provided by

ಸಿದ್ದಾಪುರ ತಾಲ್ಲೂಕಿನ ಕೂರ್ಲಕೈ ಗ್ರಾಮದ 60 ವರ್ಷದ ಮಹಿಳೆ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅವರಿಗೆ 20 ದಿನಗಳ ಹಿಂದೆ ಮಂಗನ ಜ್ವರ ಕಾಣಿಸಿಕೊಂಡಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದರು. ಮೂರು ದಿನಗಳಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಸಿದ್ದಾಪುರ ತಾಲ್ಲೂಕಿನಲ್ಲಿಯೇ ಮಂಗನ ಕಾಯಿಲೆ ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.   ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಬ್ಬರು ರೋಗದಿಂದ ಮೃತಪಟ್ಟಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ