ಶೋಭಾ ಕರಂದ್ಲಾಜೆ ಹೇಳಿಕೆ  ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಚುನಾವಣಾ ಆಯೋಗ ನಿರ್ದೇಶನ

shobha karandlaje
20/03/2024

ನವದೆಹಲಿ: ರಾಮೇಶ್ವರ ಕೆಫೆಯಲ್ಲಿ‌ ಸ್ಫೋಟಕ್ಕೆ‌ ತಮಿಳುನಾಡು ನಂಟು ಇದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇದೀಗ ಸಂಕಷ್ಟಕ್ಕೆ ಸಿಲುಕಿದ್ದು, ಶೋಭಾ ವಿರುದ್ಧ ಡಿಎಂಕೆ ನೀಡಿದ ದೂರಿನ ಬೆನ್ನಲ್ಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಬುಧವಾರ ನಿರ್ದೇಶನ ನೀಡಿದೆ.

ಈ ವಿಷಯದ ಬಗ್ಗೆ 48 ಗಂಟೆಗಳ ಒಳಗೆ ವರದಿ ನೀಡುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಐಇಡಿ ಸ್ಫೋಟಕ್ಕೆ ತಮಿಳುನಾಡಿನ ವ್ಯಕ್ತಿಯೊಬ್ಬರು ಕಾರಣ. ಬಾಂಬರ್ ಕೃಷ್ಣಗಿರಿಯ ಅರಣ್ಯದಲ್ಲಿ ತರಬೇತಿ ಪಡೆದಿದ್ದಾನೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದರು. ಅವರ ಹೇಳಿಕೆಯನ್ನು ಖಂಡಿಸಿದ್ದ ಡಿಎಂಕೆ, ಕೇಂದ್ರ ಸಚಿವೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು.

ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಶೋಭಾ ಕರಂದ್ಲಾಜೆ, ‘ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ತಮಿಳುನಾಡಿನಿಂದ ಬಂದವರು ಇಲ್ಲಿ ಬಾಂಬ್ ಇಡುತ್ತಾರೆ. ದೆಹಲಿಯಿಂದ ಬಂದವರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಾರೆ ಮತ್ತು ಕೇರಳದಿಂದ ಬಂದವರು ಆಸಿಡ್ ದಾಳಿ ನಡೆಸುತ್ತಾರೆ ಎಂದು ಹೇಳಿಕೆ ನೀಡಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version