ತೆಲಂಗಾಣ ಕಾಂಗ್ರೆಸ್ ರಾಜ್ಯಾಧ್ಯಕ್ಷರಿಗೆ ಶುಭ ಹಾರೈಸಿದ್ದೇ ಯಡವಟ್ಟಾಯಿತು: ನೀತಿ ಸಂಹಿತೆ ಉಲ್ಲಂಘನೆಯಡಿಯಲ್ಲಿ ಡಿಜಿಪಿ ಅಂಜನಿ ಕುಮಾರ್ ಅಮಾನತು

04/12/2023

ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಲು ಚುನಾವಣಾ ಆಯೋಗ (ಇಸಿ) ಆದೇಶಿಸಿದೆ ಎಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಹೇಳಿದೆ. ತೆಲಂಗಾಣದ ಪೊಲೀಸ್ ಮಹಾನಿರ್ದೇಶಕರು, ತೆಲಂಗಾಣದ ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಸಂಜಯ್ ಜೈನ್ ಮತ್ತು ನೋಡಲ್ (ವೆಚ್ಚ) ಮಹೇಶ್ ಭಾಗವತ್ ಅವರೊಂದಿಗೆ ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ಹೈದರಾಬಾದ್ ನಲ್ಲಿ ಅವರ ನಿವಾಸದಲ್ಲಿ ಭೇಟಿ ಮಾಡಿ ಹೂಗುಚ್ಛ ನೀಡಿ ಶುಭ ಹಾರೈಸಿದ್ದರು. ಇದು ನೀತಿ ಸಂಹಿತೆ ಉಲ್ಲಂಘನೆ ಎಂದು ಚುನಾವಣಾ ಆಯೋಗ ಹೇಳಿದೆ.

ಮತದಾನದ ದಿನದಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿವೆ. ಚುನಾವಣಾ ದಿನದಂದು, ಭಾರತೀಯ ರೈತ ಸಮಿತಿ (ಬಿಆರ್ ಎಸ್) ಮತ್ತು ಕಾಂಗ್ರೆಸ್ ಎರಡೂ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆ ಮಾಡಿದೆ ಹಾಗೂ ಅಧಿಕಾರ ದುರುಪಯೋಗ ಮಾಡಿದೆ ಎಂದು ಪರಸ್ಪರ ದೂರುಗಳು ದಾಖಲಾಗಿದೆ. ಬಿಆರ್ ಎಸ್ ಅಭ್ಯರ್ಥಿಗಳು ಹಣದ ಮೂಲಕ ಮತದಾರರ ಮೇಲೆ ಪ್ರಭಾವ ಬೀರಲು ಅವಕಾಶ ನೀಡಲಾಗಿದೆ ಎಂದು ಬಿಜೆಪಿ ಕಳವಳ ವ್ಯಕ್ತಪಡಿಸಿದೆ.

ಇತ್ತೀಚಿನ ಸುದ್ದಿ

Exit mobile version