ಎರಡು ರಾಜ್ಯಗಳ ಚುನಾವಣಾ ಫಲಿತಾಂಶ: ರಾಹುಲ್ ಗಾಂಧಿಯವರ ಪ್ರತಿಕ್ರಿಯೆ ಏನು? - Mahanayaka
10:31 PM Thursday 21 - August 2025

ಎರಡು ರಾಜ್ಯಗಳ ಚುನಾವಣಾ ಫಲಿತಾಂಶ: ರಾಹುಲ್ ಗಾಂಧಿಯವರ ಪ್ರತಿಕ್ರಿಯೆ ಏನು?

09/10/2024


Provided by

ಚುನಾವಣಾ ಫಲಿತಾಂಶ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ಜಮ್ಮು- ಕಾಶ್ಮೀರದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಹೇಳಿ, ಹರಿಯಾಣದ ಅನಿರೀಕ್ಷಿತ ಫಲಿತಾಂಶಗಳ ಬಗ್ಗೆ ವಿಶ್ಲೇಷಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಹರಿಯಾಣದ, ಹಲವು ವಿಧಾನಸಭಾ ಕ್ಷೇತ್ರಗಳಿಂದ ಬಂದ ದೂರುಗಳ ಬಗ್ಗೆ ಚುನಾವಣಾ ಆಯೋಗದ ಗಮನ ಸೆಳೆಯಲಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಜಮ್ಮು ಕಾಶ್ಮೀರದಲ್ಲಿ ಇಂಡಿಯಾ ಮೈತ್ರಿಕೂಟದ ವಿಜಯವು ಸಂವಿಧಾನದ ವಿಜಯವಾಗಿದೆ.

ಪ್ರಜಾಪ್ರಭುತ್ವದ ಸ್ವಾಭಿಮಾನಕ್ಕೆ ಸಂದ ಜಯವಾಗಿದೆ ಎಂದಿದ್ದಾರೆ.. ಹರ್ಯಾಣದಲ್ಲಿ ಪಕ್ಷವನ್ನು ಬೆಂಬಲಿಸಿದ ಎಲ್ಲಾ ಜನರಿಗೆ ಮತ್ತು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ನಾವು ಹಕ್ಕುಗಳಿಗಾಗಿ, ಸಾಮಾಜಿಕ ಮತ್ತು ಆರ್ಥಿಕ ನ್ಯಾಯಕ್ಕಾಗಿ, ಸತ್ಯಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಮತ್ತು ನಿಮ್ಮ ಬಗ್ಗೆ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆಂದು ತಿಳಿಸಿದ್ದಾರೆ.

ದೇಶದಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ದಾಖಲೆಯ 3ನೇ ಬಾರಿಗೆ ವಿಜಯ ಸಾಧಿಸಿದ್ದು, ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಸರ್ವಾಧಿಕ 29 ಸ್ಥಾನ ಗೆದ್ದಿದೆಯಾದರೂ, ಕಾಶ್ಮೀರ ಭಾಗದಲ್ಲಿ ಉತ್ತಮ ಸ್ಥಾನ ಗಳಿಸಲು ವಿಫಲವಾಗಿದೆ. ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್​ ಕಾನ್ಫ್​ರೆನ್ಸ್​​ ಮತ್ತು ಕಾಂಗ್ರೆಸ್​ ಮೈತ್ರಿಗೆ ಭರ್ಜರಿ ಜಯ ಸಿಕ್ಕಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ