ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ ಅಥವಾ ಬಿಜೆಪಿಯೋ: ಸಿದ್ದರಾಮಯ್ಯ

siddaramaya
27/04/2023

ಬೆಂಗಳೂರು : ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ ಅಥವಾ ಬಿಜೆಪಿಯೋ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ .

ಬಿಜೆಪಿ ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ?ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ? ಎಂದು ಪತ್ರಿಕಾ ಪ್ರಕಟಣೆ ಮೂಲಕ ಪ್ರಶ್ನಿಸಿದ್ದಾರೆ.

ಬಿಜೆಪಿಯು ಈ ಪತ್ರದ ಮೂಲಕ ತಮ್ಮ ಪಕ್ಷದ ಪರವಾಗಿ ಇಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾಪಡೆಗಳನ್ನು ನಿಯೋಜಿಸಿ ಬಳಿಕ ಮತದಾರರನ್ನು ಬೆದರಿಸಿ ಅವರು ಮತದಾನ ಮಾಡದಂತೆ ತಡೆಯುವ ದುರುದ್ದೇಶ ಹೊಂದಿದೆ.

ಚುನಾವಣಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು? ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಷಾಮೀಲಾಗುರುವುದು ಸ್ಪಷ್ಟವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯಲ್ಲಿರುವ ಸಂಸದೆ ಶೋಭಾ ಕರಂದ್ಲಾಜೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳ ವಿವರ ಸಲ್ಲಿಸುವಂತೆ ಜಿಲ್ಲಾಧ್ಯಕ್ಷರು , ಪ್ರಧಾನ ಕಾರ್ಯದರ್ಶಿಗಳು ಹಾಗೂ ಚುನಾವಣಾ ಏಜೆಂಟ್​ಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version