ಸುಪ್ರೀಂ ಕೋರ್ಟ್ ತೀರ್ಪಿಗೆ ವಿಪಕ್ಷಗಳ ಸಂತಸ: 'ಹೋರಾಟಕ್ಕೆ ಜಯ ಸಿಕ್ಕಿದೆ' ಎಂದ ಪ್ರಶಾಂತ್ ಭೂಷಣ್ - Mahanayaka

ಸುಪ್ರೀಂ ಕೋರ್ಟ್ ತೀರ್ಪಿಗೆ ವಿಪಕ್ಷಗಳ ಸಂತಸ: ‘ಹೋರಾಟಕ್ಕೆ ಜಯ ಸಿಕ್ಕಿದೆ’ ಎಂದ ಪ್ರಶಾಂತ್ ಭೂಷಣ್

16/02/2024


Provided by

ಚುನಾವಣಾ ಬಾಂಡ್‌ಗಳ ಯೋಜನೆ ಅಸಾಂವಿಧಾನಿಕ ಎಂಬ ಸುಪ್ರೀಂ ಕೋರ್ಟ್ ತೀರ್ಪುಗೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಮೋದಿ ಭ್ರಷ್ಟ ನೀತಿಗಳಿಗೆ ಮತ್ತೊಂದು ಉದಾಹರಣೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ರಾಹುಲ್ ಗಾಂಧಿ, ನರೇಂದ್ರ ಮೋದಿಯವರ ಭ್ರಷ್ಟ ನೀತಿಗಳಿಗೆ ಇನ್ನೊಂದು ಸಾಕ್ಷಿ ನಿಮ್ಮ ಮುಂದಿದೆ. ಬಿಜೆಪಿ ಚುನಾವಣಾ ಬಾಂಡ್‌ಗಳನ್ನು ಲಂಚ ಮತ್ತು ಕಮಿಷನ್ ಪಡೆಯುವ ಮಾಧ್ಯಮವನ್ನಾಗಿ ಮಾಡಿಕೊಂಡಿತ್ತು ಎಂದು ಆರೋಪಿಸಿದ್ದಾರೆ.

ಇದು ಚುನಾವಣೆಯಲ್ಲಿ ಭಾರೀ ಪರಿಣಾಮ ಬೀರಲಿದೆ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ. ಸಿಪಿಐಎಂ ಪಕ್ಷ ಇದರ ಕ್ರೆಡಿಟ್ ತೆಗೆದುಕೊಳ್ಳಲು ನೋಡಿದೆ. ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದು ನಮ್ಮ ಪಕ್ಷ ಮಾತ್ರ ಎಂದರು.

ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಅರ್ಜಿದಾರ ಪ್ರಶಾಂತ್ ಭೂಷಣ್ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮಾತ್ರ, ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಗೌರವಿಸುತ್ತೇವೆ. ಆದ್ರೆ, ಚುನಾವಣಾ ಬಾಂಡ್‌ಗಳ ಯೋಜನೆ ವಿಚಾರದಲ್ಲಿ ವಿಪಕ್ಷಗಳು ಸುಮ್ನೆ ರಾಜಕೀಯ ಮಾಡ್ತಿವೆ ಎಂದು ಆಪಾದಿಸಿದೆ.ಚುನಾವಣಾ ಬಾಂಡ್‌ಗಳ ಯೋಜನೆ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಇತ್ತೀಚಿನ ಸುದ್ದಿ