ಚಿಕ್ಕಮಗಳೂರು: ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್, ಪ್ರಾಣಾಪಾಯದಿಂದ ಪಾರಾದ ಸವಾರ - Mahanayaka
5:47 PM Tuesday 8 - September 2026

ಚಿಕ್ಕಮಗಳೂರು: ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್, ಪ್ರಾಣಾಪಾಯದಿಂದ ಪಾರಾದ ಸವಾರ

electric bike.jpg
22/08/2026

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದಲ್ಲಿ ನಡುರಸ್ತೆಯಲ್ಲೇ ಎಲೆಕ್ಟ್ರಿಕ್ ಬೈಕ್ ಒಂದು ಧಗಧಗನೆ ಹೊತ್ತಿ ಉರಿದ ಘಟನೆ ನಡೆದಿದೆ. ಬೈಕ್ ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಸಮಯಪ್ರಜ್ಞೆ ಮೆರೆದ ಸವಾರ ತಕ್ಷಣವೇ ಕೆಳಗಿಳಿದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಎಲೆಕ್ಟ್ರಿಕ್ ಬೈಕ್ ಪಂಚನಹಳ್ಳಿ ಗ್ರಾಮದ ನಂದೀಶ್ ಎಂಬುವರಿಗೆ ಸೇರಿದ್ದಾಗಿದೆ. ಇವರು ಒಂದೂವರೆ ವರ್ಷದ ಹಿಂದೆ ಹುಳಿಯಾರಿನಿಂದ ಈ ಸೆಕೆಂಡ್ ಹ್ಯಾಂಡ್ ಬೈಕ್ ಅನ್ನು ಖರೀದಿಸಿದ್ದರು. ನಂದೀಶ್ ಅವರು ತಮ್ಮ ತೋಟದ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ರಸ್ತೆ ಮಧ್ಯೆ ಈ ಅವಘಡ ಸಂಭವಿಸಿದೆ.

ಚಲಿಸುತ್ತಿದ್ದ ಬೈಕ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ಬೈಕ್ ಗೆ ಆವರಿಸಿದೆ. ರಸ್ತೆ ಮಧ್ಯೆ ಬೆಂಕಿ ಹೊತ್ತಿಕೊಂಡಿದ್ದರಿಂದ ಅಕ್ಕಪಕ್ಕದಲ್ಲಿ ಬೆಂಕಿ ನಂದಿಸಲು ತಕ್ಷಣಕ್ಕೆ ನೀರು ಲಭ್ಯವಾಗಿಲ್ಲ. ಗಾಬರಿಗೊಂಡ ನಂದೀಶ್ ಅವರು ನೀರಿಗಾಗಿ ಹುಡುಕಾಟ ನಡೆಸಿ ವಾಪಸ್ ಬರುವಷ್ಟರಲ್ಲಿ, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬೈಕ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ

mobil chat sitesi