ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ!

taxi
06/07/2024

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ .ಈ ಮೂಲಕ ಆಟೋ, ಕ್ಯಾಬ್ ಚಾಲಕರು ನಿಟ್ಟುಸಿರು ಬಿಟ್ಟಿದ್ದಾರೆ.

ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಈ ವೇಳೆ ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿತ್ತು.

ಆದರೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡುವಂತೆ ಸಾರಿಗೆ ಸಂಘಟನೆಗಳು ಸರ್ಕಾರಕ್ಕೆ ಹಲವು ಬಾರಿ ಒತ್ತಾಯಿಸಿತ್ತು. ಸಾರಿಗೆ ಸಂಘಟನೆಗಳ ಮನವಿ ಬೆನ್ನಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳು ಅನಧಿಕೃತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಮುಂದಾಗಿದೆ.

ಇದೀಗ ಸಾರಿಗೆ ಅಧಿಕಾರಿಗಳು ನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೀಜ್ ಮಾಡಲು ಮುಂದಾಗಿದ್ದು. 11 ತಂಡವನ್ನು ರಚಿಸಿ ಆರ್ಟಿಓ ಅಧಿಕಾರಿಗಳ ನೇತೃತ್ವದಲ್ಲಿ ಸೀಜ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜು.5ರಿಂದ ಕಡ್ಡಾಯವಾಗಿ ಎಲೆಕ್ಟ್‌ಇಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಕಂಡುಬಂದಲ್ಲಿ ಕೂಡಲೇ ಅವುಗಳನ್ನು ಜಪ್ತಿ ಮಾಡಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version