ಮಹಾಶಿವರಾತ್ರಿ ಸಂಭ್ರಮದಲ್ಲಿದ್ದ 14 ಮಕ್ಕಳಿಗೆ ವಿದ್ಯುತ್ ಶಾಕ್: ಇಬ್ಬರ ಸ್ಥಿತಿ ಗಂಭೀರ
ನವದೆಹಲಿ: ಮಹಾಶಿವರಾತ್ರಿ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿದ ಪರಿಣಾಮ 14 ಮಕ್ಕಳಿಗೆ ಸುಟ್ಟ ಗಾಯಗಳಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.
ಮಹಾಶಿವರಾತ್ರಿಯ ಆಚರಣೆಯ ಸಂದರ್ಭದಲ್ಲಿ ಕೋಟಾದಲ್ಲಿ ನಡೆದ ‘ಶಿವ್ ಬಾರಾತ್’ನಲ್ಲಿ ಭಾಗವಹಿಸಿದ್ದ 10–16 ವರ್ಷ ವಯಸ್ಸಿನ ಮಕ್ಕಳಿಗೆ ಕುನ್ಹಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಕಟೌರಾ ಪ್ರದೇಶದಲ್ಲಿ ಮೇಲ್ಮುಖವಾಗಿ ಹಾದು ಹೋಗುತ್ತಿದ್ದ ಹೈ–ಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಗಾಯಗಳಾಗಿದೆ ಎನ್ನಲಾಗಿದೆ.
ಘಟನೆಯಲ್ಲಿ 14 ಮಕ್ಕಳು ಗಾಯಗೊಂಡಿದ್ದು, ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಹೀರಾಲಾಲ್ ನಗರ್ ತಿಳಿಸಿದ್ದಾರೆ.
ಚಿಕಿತ್ಸೆ ಪಡೆಯುತಿರುವ ಮಕ್ಕಳ ಯೋಗಕ್ಷೇಮ ವಿಚಾರಿಸಿದ ಸಚಿವ ಹೀರಾಲಾಲ್ ನಗರ್ ಆಸ್ಪತ್ರೆಯ ‘ಇದು ಅತ್ಯಂತ ದುಃಖಕರ ಘಟನೆಯಾಗಿದೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಮಕ್ಕಳಿಗೆ ಸಾಧ್ಯವಿರುವ ಎಲ್ಲ ಚಿಕಿತ್ಸೆ ನೀಡಲು ವಿಶೇಷ ತಂಡ ರಚಿಸಲಾಗಿದೆ. ಯಾವುದೇ ರೀತಿಯ ನಿರ್ಲಕ್ಷ್ಯ ನಡೆದಿದ್ದರೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ, ಎಂದು ಅವರು ಹೇಳಿದರು. ಘಟನೆಗೆ ಹೈ-ಟೆನ್ಷನ್ ಓವರ್ಹೆಡ್ ವಿದ್ಯುತ್ ತಂತಿ ವಿದ್ಯುತ್ ಆಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth




























