ವಿದ್ಯುತ್ ಶಾಕ್ ನಿಂದ ಮರದಲ್ಲೇ ಜೀವ ಬಿಟ್ಟ ವ್ಯಕ್ತಿ: ಮರದಲ್ಲೇ ನೇತಾಡಿದ ಮೃತದೇಹ! - Mahanayaka

ವಿದ್ಯುತ್ ಶಾಕ್ ನಿಂದ ಮರದಲ್ಲೇ ಜೀವ ಬಿಟ್ಟ ವ್ಯಕ್ತಿ: ಮರದಲ್ಲೇ ನೇತಾಡಿದ ಮೃತದೇಹ!

mudigere news
06/08/2023


Provided by

ಚಿಕ್ಕಮಗಳೂರು: ಮರದ ಕೊಂಬೆ ಕತ್ತರಿಸುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ 56 ವರ್ಷ ವಯಸ್ಸಿನ  ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ  ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಯಿಲುಮನೆ ಗ್ರಾಮದಲ್ಲಿ ನಡೆದಿದೆ.

ಲೋಕಪ್ಪ ಗೌಡ (56) ವಿದ್ಯುತ್ ಆಘಾತದಿಂದ ಮೃತಪಟ್ಟವರಾಗಿದ್ದಾರೆ. ಮರ ಏರಿ ಕೊಂಬೆಗಳನ್ನು ಕತ್ತರಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗಲಿದ್ದು, ವಿದ್ಯುತ್ ನ ತೀವ್ರತೆಗೆ  ಮರದಲ್ಲೇ ಪ್ರಾಣ ಬಿಟ್ಟಿದ್ದು, ಮೃತದೇಹ ಮರದಲ್ಲೇ ನೇತಾಡುತ್ತಿರುವ ದೃಶ್ಯ ಬೆಚ್ಚಿಬೀಳಿಸಿದೆ.

ಘಟನಾ ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದಲ್ಲಿ ವಿದ್ಯುತ್ ಸ್ಪರ್ಶದಿಂದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ  ಎಂಬ ಆಕ್ರೋಶ ಕೂಡ ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ