ಮನೆಯ ಲೈಟ್ ಸರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: 17 ವರ್ಷದ ಬಾಲಕನ ದಾರುಣ ಸಾವು - Mahanayaka

ಮನೆಯ ಲೈಟ್ ಸರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: 17 ವರ್ಷದ ಬಾಲಕನ ದಾರುಣ ಸಾವು

yashavant
19/10/2024


Provided by

ಚಿಕ್ಕಬಳ್ಳಾಪುರ:  ತಾಲೂಕಿನ ಕುರ್ಲಹಳ್ಳಿ ಗ್ರಾಮದಲ್ಲಿ  ವಿದ್ಯುತ್ ತಗುಲಿ 17 ವರ್ಷ ವಯಸ್ಸಿನ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಯಶವಂತ್(17) ಮೃತಪಟ್ಟ ಬಾಲಕನಾಗಿದ್ದಾನೆ. ಬಾಲಕನ ತಂದೆ ತಾಯಿ ಕೂಲಿ ಕಾರ್ಮಿಕರಾಗಿದ್ದಾರೆ. ಇಲ್ಲಿನ ಹಳೆಯ ಬಾಡಿಗೆ ಮನೆಯೊಂದನ್ನು ಬಾಡಿಗೆಗೆ ಪಡೆದು ಅಲ್ಲಿ ಜೀವನ ಸಾಗಿಸುತ್ತಿದ್ದರು.

ಯಶ್ವಂತ್ ಚಿಕ್ಕಬಳ್ಳಾಪುರದ ಜ್ಯೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದ. ಘಟನೆ ನಡೆದ ದಿನದಂದು ಮನೆಯ ಲೈಟ್ ಉರಿಯುತ್ತಿರಲಿಲ್ಲ, ಹೀಗಾಗಿ ಇದನ್ನು ದುರಸ್ತಿ ಮಾಡಲು ಯಶ್ವಂತ್ ಮುಂದಾಗಿದ್ದಾನೆ.

ಕತ್ತರಿಯಿಂದ ವೈರ್ ಕಟ್ ಮಾಡುತ್ತಿದ್ದ ವೇಳೆ ಆತನಿಗೆ ಕರೆಂಟ್ ಶಾಕ್ ಹೊಡೆದಿದೆ. ಪರಿಣಾಮವಾಗಿ ಆತ ನೆಲಕ್ಕೆ ಬಿದ್ದಿದ್ದಾನೆ. ಈ ವೇಳೆ  ಮನೆಯ ಹೊರಗೆ ಬಟ್ಟೆ ಒಗೆಯುತ್ತಿದ್ದ ಯಶ್ವಂತ್ ನ ತಾಯಿ ಓಡಿ ಬಂದು, ಆಟೋ ಮೂಲಕ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಆತನ್ನು ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಆತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ