ಕಂಬದಿಂದ ತುಂಡಾಗಿ ಮನೆಯ ಮೇಲೆ ಬಿದ್ದ ವಿದ್ಯುತ್‌ ತಂತಿ: ಹೊತ್ತಿ ಉರಿದ ಮನೆ! - Mahanayaka

ಕಂಬದಿಂದ ತುಂಡಾಗಿ ಮನೆಯ ಮೇಲೆ ಬಿದ್ದ ವಿದ್ಯುತ್‌ ತಂತಿ: ಹೊತ್ತಿ ಉರಿದ ಮನೆ!

chikkamagaluru
19/03/2024

ಚಿಕ್ಕಮಗಳೂರು: ಕಂಬದಿಂದ ತುಂಡಾಗಿ ಮನೆಯ ಮೇಲೆ ವಿದ್ಯುತ್‌ ತಂತಿಯೊಂದು ಬಿದ್ದ ಪರಿಣಾಮ ಮನೆಯೊಂದು ಹಾನಿಗೊಂಡಿರುವ ಘಟನೆ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆ ವೇಳೆ ಯಾರೂ ಮನೆಯಲ್ಲಿ ಇರದ ಕಾರಣ ಯಾವುದೇ ಜೀವ ಹಾನಿ ಸಂಭವಿಸಿಲ್ಲ, ಮನೆಯ ಮೇಲ್ಛಾವಣಿಗೆ ಹಾನಿಯಾಗಿದ್ದು, ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಮಂಜಮ್ಮ, ಚಂದ್ರಪ್ಪ ಎಂಬುವರ ಮನೆಯಲ್ಲಿ ಈ ಅನಾಹುತ ಸಂಭವಿಸಿದೆ. ಮನೆಯವರು ತೋಟಕ್ಕೆ ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಬೆಂಕಿ ನಂದಿಸಿದರು. ಬೆಂಕಿ ಅನಾಹುತದ ಪರಿಣಾಮ ಮನೆಗೆ ಸಂಪೂರ್ಣ ಹಾನಿಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ