ಮನೆಯ ಬಳಿ ನಿಂತಿದ್ದ ಮಹಿಳೆಯ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ತಂತಿ! - Mahanayaka
4:50 PM Wednesday 10 - September 2025

ಮನೆಯ ಬಳಿ ನಿಂತಿದ್ದ ಮಹಿಳೆಯ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ತಂತಿ!

bangalore news
07/10/2024

ಬೆಂಗಳೂರು:  ಮನೆಯ ಬಳಿಯಲ್ಲಿ ನಿಂತಿದ್ದ ಮಹಿಳೆಯ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.


Provided by

ಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ(50) ಮೃತಪಟ್ಟವರಾಗಿದ್ದಾರೆ.  ಸೋಮವಾರ ಬೆಳಗ್ಗೆ ಸುಮಾರು 10 ಗಂಟೆಯ ಸುಮಾರಿಗೆ ಈ ದುರ್ಘಟನೆ ನಡೆದಿದೆ.

ಘಟನೆಯಿಂದಾಗಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮನೆಯ ಬಳಿ ಮಹಿಳೆ ನಿಂತು ಕೊಂಡಿದ್ದರು. ಈ ವೇಳೆ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಮಹಿಳೆಯ ಮೇಲೆಯೇ ಬಿದ್ದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ  ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ