ಗ್ರಾಮ ಪಂಚಾಯತ್ ಅಧ್ಯಕ್ಷೆಯ ಮನೆಯಲ್ಲೇ ವಿದ್ಯುತ್ ಅವಘಡ: ಸುಟ್ಟು ಕರಕಲಾದ ಮನೆ

ದಾವಣಗೆರೆ: ಗ್ರಾಮ ಪಂಚಾಯತ್ ಸದಸ್ಯೆಯೊಬ್ಬರ ಮನೆ ವಿದ್ಯುತ್ ಅವಘಡದಿಂದ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ದಾವಣಗೆರೆ ತಾಲೂಕಿನ ನರಗನಹಳ್ಳಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಘಟನೆಯಿಂದ ಸುಮಾರು 8 ಲಕ್ಷ ರೂ. ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯ ವಿವರ:
ನರಗನಹಳ್ಳಿ ಪಂಚಾಯತಿ ಸದಸ್ಯೆ ಲಲಿತಾ ಹಾಗೂ ಅವರ ಕುಟುಂಬಸ್ಥರು ರಾತ್ರಿ ಊಟದ ನಂತರ ಮಲಗಿದ್ದರು. ರಾತ್ರಿ 10 ಗಂಟೆಯ ಸುಮಾರಿಗೆ ವಿದ್ಯುತ್ ನಿಂದ ಬೆಂಕಿಯ ಜ್ವಾಲೆ ಹರಡಿದೆ. ಈ ವೇಳೆ ತಕ್ಷಣವೇ ಸ್ಥಳೀಯರು ಓಡಿ ಬಂದು ನೀರು ಮತ್ತು ಇತರ ಸಾಧನಗಳಿಂದ ಬೆಂಕಿ ನಂದಿಸಲು ಹರಸಾಹಸಪಟ್ಟರು. ಆದರೆ ಬೆಂಕಿಯ ಕೆನ್ನಾಲಿಗೆಗೆ ಸಾಕಷ್ಟು ನಷ್ಟ ಉಂಟಾಗಿದೆ.
ವಿದ್ಯುತ್ ಸುರಕ್ಷತೆ ಬಗ್ಗೆ ಭೀತಿ:
ಘಟನೆಯ ಬೆನ್ನಲ್ಲೇ ಗ್ರಾಮದಲ್ಲಿ ವಿದ್ಯುತ್ ಸುರಕ್ಷತೆಯ ಬಗ್ಗೆ ಭೀತಿ ಸೃಷ್ಟಿಯಾಗಿದೆ. ವಿದ್ಯುತ್ ಇಲಾಖೆಯು ಈ ಬಗ್ಗೆ ಗಮನ ಹರಿಸಬೇಕು ಎನ್ನುವ ಒತ್ತಾಯ ಕೂಡ ಗ್ರಾಮಸ್ಥರಿಂದ ಕೇಳಿ ಬಂದಿದೆ. ಘಟನೆ ಸಂಬಂಧ ಮಾಯಕೊಂಡ ಪೊಲೀಸ್ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD