ಪುಂಡಾನೆ ಸೆರೆ ಹಿಡಿದ ಬಂಡೀಪುರದ ಗಪಪಡೆ - Mahanayaka
11:14 AM Thursday 29 - January 2026

ಪುಂಡಾನೆ ಸೆರೆ ಹಿಡಿದ ಬಂಡೀಪುರದ ಗಪಪಡೆ

bandipura
07/06/2023

ಚಾಮರಾಜನಗರ: ಕಾಡಂಚಿನ ಗ್ರಾಮಗಳಲ್ಲಿ ಬೆಳೆನಾಶ ಮಾಡಿ ರೈತರ ನಿದ್ರೆಗೆಡಿಸಿದ್ದ ಪುಂಡಾನೆಯನ್ನು ಬಂಡೀಪುರ ಅರಣ್ಯ ಇಲಾಖೆಯು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದೆ.‌

ಗುಂಡ್ಲುಪೇಟೆ ತಾಲೂಕಿನ‌ ಲೊಕ್ಕೆರೆ ಅರಣ್ಯ ಪ್ರದೇಶದಲ್ಲಿ ಬಿದಿರು ತಿನ್ನುತ್ತಿದ್ದ ಪುಂಡಾನೆಯನ್ನು ಜಯಪ್ರಕಾಶ್, ಪಾರ್ಥಸಾರಥಿ, ಗಜೇಂದ್ರ, ಹರ್ಷ ಎಂಬ ಸಾಕಾನೆಗಳ ಸಹಾಯದಿಂದ ಸೆರೆ ಹಿಡಿಯಲಾಗಿದೆ. ಕುಂದಕೆರೆ ಅರಣ್ಯ ವಲಯದ ಜಮೀನುಗಳಲ್ಲಿ ನಿತ್ಯವೂ ಈ ಪುಂಡಾನೆ ಬೆಳೆ ನಾಶ ಮಾಡುತ್ತಿತ್ತು ,

ರೋಸಿಹೋದ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದ್ದರು.‌ ಇದರಿಂದ, ಎಚ್ಚೆತ್ತ ಬಂಡೀಪುರ‌ ಸಿಬ್ಬಂದಿ 4 ದಿನಗಳಿಂದ ಆನೆ ಸೆರೆ ಕಾರ್ಯಾಚರಣೆ ಕೈಗೊಂಡಿದ್ದರು ಈಗ ಅದು ಯಶಸ್ವಿಯಾಗಿದೆ.

bandipura

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ