ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ:  ವಾಹನಗಳು ಸಾಲುಗಟ್ಟಿ ನಿಂತು ಟ್ರಾಫಿಕ್ ಜಾಮ್ - Mahanayaka
12:38 PM Tuesday 28 - October 2025

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ:  ವಾಹನಗಳು ಸಾಲುಗಟ್ಟಿ ನಿಂತು ಟ್ರಾಫಿಕ್ ಜಾಮ್

elephant
17/05/2023

ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ  4:30 ಗಂಟೆ ಸಮಯದಲ್ಲಿ ಒಂಟಿ ಸಲಗ  ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರಿಗೆ ವಾಹನ ಸವಾರರಿಗೆ ಭಯ ಸೃಷ್ಟಿ ಮಾಡಿದೆ.

ಸಂಜೆ ಮಂಗಳೂರು ಹಾಸನ ಸರ್ಕಾರಿ ಬಸ್ ಸಂಚರಿಸುವ ವೇಳೆ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಬಸ್ ಪಾರಾಗಿದೆ. ಬಸ್ ಅಣಿ ಅಂತರದಲ್ಲಿ ಕಾಡಾನೆ ಕಂಡು ಚಾಲಕ ಬಸ್ ನಿಲ್ಲಿಸಿದ್ದರಿಂದ ರಸ್ತೆಯಲ್ಲಿ ನಿಂತು ಮರದತ್ತಿರ ವಿಶ್ರಾಂತಿ ಪಡೆಯುತ್ತಿದ್ದ ಕಾಡಾನೆ ಸ್ವಲ್ಪ ಸಮಯದ ನಂತರ ಏಳನೇ ತಿರುವಿನ ಮತ್ತೊಂದು ಭಾಗದಲ್ಲಿ ಹೋಗಿ ನಿಂತಿತು.

ಬಸ್ ನ ಹಿಂದೆ ಹಲವು ವಾಹನಗಳು ಅರ್ಧ ಗಂಟೆಗೂ ಅಧಿಕ ಕಾಲ ಸಾಲುಗಟ್ಟಿ ನಿಂತಿದ್ದು ಒಂದೊಂದೇ ವಾಹನಗಳು ನಿಧಾನವಾಗಿ  ಪಾಸ್ ಆದವು. ಕಾಡಾನೆ ನಿಂತು ನೋಡುವ ದೃಶ್ಯ ಆದರೆ ಕೆಲವು ದ್ವಿಚಕ್ರ ವಾಹನ ಸವಾರರು ಇದ್ದುದರಿಂದ ಅಪಾಯದ ಸೂಚನೆ ಎದ್ದು ಕಾಣುತ್ತಿತ್ತು.

ಬಸ್ ಕಾಡಾನೆಯಿಂದ ತುಸು ದಾಟಿದ ನಂತರ ಪ್ರಯಾಣಿಕರೆಲ್ಲರೂ ನಿಟ್ಟುಸಿರು ಬಿಟ್ಟರು.ಅರಣ್ಯ ಅಧಿಕಾರಿಗಳು ಚಾರ್ಮಾಡಿ ಘಾಟಿನಲ್ಲಿ ರಾತ್ರಿ ಹೊತ್ತು ವಾಹನ ಸಂಚಾರ ನಿರ್ಬಂಧಿಸಿ ಕಾಡಾನೆಯನ್ನು ಸ್ಥಳಾಂತರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಆನೆ ದಾಳಿಗೆ ಅಪಾರ ಬೆಳೆ ನಾಶ:

ಕಾಫಿ, ಅಡಕೆ ತೋಟಕ್ಕೆ ನುಗ್ಗಿದ ಕಾಡಾನೆಯೊಂದು ಬೆಳೆ ನಾಶ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗುತ್ತಿ ಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗುತ್ತಿಹಳ್ಳಿ ಗ್ರಾಮದ ಪ್ರವೀಣ್ ಎಂಬುವರಿಗೆ ಸೇರಿದ್ದ ತೋಟ ನಾಶವಾಗಿದ್ದು, ಸಾಲ ಮಾಡಿ ಬೆಳೆದಿದ್ದ ರೈತ ಕಂಗಾಲಾಗಿದ್ದಾರೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಪ್ರವೀಣ್ ಒತ್ತಾಯಿಸಿದ್ದಾರೆ.

ಇನ್ನೂ ಅರಣ್ಯ ಇಲಾಖೆ ಕೂಡಲೇ ಕಾಡಾನೆಯನ್ನು ಸ್ಥಳಾಂತರ ಮಾಡಬೇಕೆಂದು ಗ್ರಾಮಸ್ಥರು ಕೂಡ ಒತ್ತಾಯಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ