ಮೂಡಿಗೆರೆ: ಕಾರ್ಯಾಚರಣೆ ಆರಂಭಿಸಿ ಕೆಲವೇ ಗಂಟೆಗಳಲ್ಲಿ ಒಂದು ಕಾಡಾನೆ ಸೆರೆ

28/11/2022

ಮೂಡಿಗೆರೆ: ತಾಲ್ಲೂಕಿನ ಕುಂದೂರು ಕೆಂಜಿಗೆ ಭಾಗದಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿಯಲು ಇಂದಿನಿಂದ ಪ್ರಾರಂಭಿಸಿದ ಕಾರ್ಯಾಚರಣೆಯಲ್ಲಿ ಒಂದು ಆನೆಯನ್ನು  ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.

ಎಸ್ಟೇಟ್ ಕುಂದೂರು ಬಳಿ ಕಾಡಾನೆಯೊಂದಕ್ಕೆ ಅರವಳಿಕೆ ಹಾಕಲಾಗಿದ್ದು, ಆ ಕಾಡಾನೆ ಸುಮಾರು 2 ಕಿ.ಮೀ. ದೂರದ ಕುಂಡ್ರಾ ಎಂಬಲ್ಲಿ ನೆಲಕುರುಳಿದ್ದು, ಕಾರ್ಯಾಚರಣೆ ನಡೆಸಿ ಸೆರೆಹಿಡಿಯಲಾಗಿದೆ. ಕಾರ್ಯಾಚರಣೆ ಪ್ರಾರಂಭಿಸಿದ ಕೆಲವೇ ಗಂಟೆಗಳಲ್ಲಿ ಒಂದು ಆನೆ ಸೆರೆಯಾಗಿದೆ.

ಸೆರೆಯಾಗಿರುವ ಕಾಡಾನೆ ಗಾತ್ರದಲ್ಲಿ ಚಿಕ್ಕದಿದೆ. ಈಗ ಸೆರೆಯಾಗಿರುವ ಕಾಡಾನೆಯನ್ನು ಎರಡು ಸಾಕಾನೆಗಳ ಸುಪರ್ದಿಯಲ್ಲಿ ನಾಗರಹೊಳೆಯ ದುಬಾರೆ ಆನೆಕ್ಯಾಂಪ್ ಗೆ ಸ್ಥಳಾಂತರಿಸಲಾಗುವುದು.

ಎರಡು ದಿನಗಳ ಬಿಡುವಿನ ಬಳಿಕ ಮುಂದಿನ ಆನೆ ಹಿಡಿಯಲು ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಮೂರು ಕಾಡಾನೆಗಳ ಸೆರೆಗೆ ಅಭಿಮನ್ಯು, ಮಹಾರಾಷ್ಟ್ರ ಭೀಮ, ಕರ್ನಾಟಕ ಭೀಮ,  ಮಹೇಂದ್ರ, ಪ್ರಶಾಂತ್, ಅರ್ಜುನ್ ಎಂಬ ಸಾಕಾನೆಗಳು ಬಂದಿದ್ದು ಉಳಿದ ಎರಡು ಕಾಡಾನೆಗಳ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version