ಡ್ರೋನ್ ಕ್ಯಾಮರಾದ ಕಣ್ಣಿಗೂ ಯಾಮಾರಿಸಿದ ಕಾಡಾನೆಗಳು: ಜನ ಎಚ್ಚರಿಕೆಯಿಂದಿರಿ ಎಂದ ಅರಣ್ಯ ಇಲಾಖೆ
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆಗಳನ್ನು ಹಿಡಿಯುವ ಕಾರ್ಯಾಚರಣೆ ಆರಂಭವಾಗಿದ್ದರೂ, ಸಾರ್ವಜನಿಕರಿಗೆ ಕಾಡಾನೆ ಭೀತಿ ತಪ್ಪಿಲ್ಲ.
ಒಂದೆಡೆ ನರ ಹಂತಕ ಆನೆಗಳನ್ನು ಹಿಡಿಯಲು ಹುಡುಕಾಟ ನಡೆಯುತ್ತಿದೆ. ಮತ್ತೊಂದೆಡೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಓಡಾಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮೈಕ್ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.
ಸತತ ಕಾರ್ಯಾಚರಣೆಯಲ್ಲೂ ಕಾಡಾನೆಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಡ್ರೋನ್ ಕ್ಯಾಮರಾ ಮೂಲಕ ಆನೆಗಳನ್ನು ಹುಡುಕಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಆದರೆ ಡ್ರೋನ್ ಕಣ್ಣಿಕ್ಕೂ ಕಾಡಾನೆಗಳು ಯಾಮಾರಿಸಿದ್ದು, ಕ್ಯಾಮರಾ ಕಣ್ಣಿಗೆ ಸಿಗದೇ ಮರೆಯಾಗಿದೆ.
ಮೂಡಿಗೆರೆ ಬೈರಾ ಆನೆ ಹಾಗೂ ಮತ್ತೊಂದು ಒಂಟಿ ಸಲಗಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ಸತತ ನಾಲ್ಕನೆಯ ದಿನವೂ ಅರಣ್ಯಾಧಿಕಾರಿಗಳು ನಿರಂತರವಾಗಿ ಹುಡುಕಾಟ ನಡೆಸುತ್ತಿದ್ದು ಬರಿಗೈಯಲ್ಲಿ ಮರಳುವಂತಾಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುಂದೂರು, ತಳವಾರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಅರಣ್ಯ ಪ್ರದೇಶದಲ್ಲಿ ಆನೆಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಕಾಫಿ ತೋಟದಲ್ಲಿ ಬೀಡು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka