32 ಸಾವಿರದಿಂದ 42 ಸಾವಿರವರೆಗೆ ವೇತನ | PUC ಪಾಸ್ ಆದವರಿಗೆ ಇಲ್ಲಿದೆ ಉದ್ಯೋಗಾವಕಾಶ
ಹಾಸನ: ಬೆಂಗಳೂರು ಸ್ಟಾಪ್ ಸೆಲೆಕ್ಷನ್ ಕಮಿಷನ್, ಕೇಂದ್ರ ಸರ್ಕಾರದ ಅಂಚೆ ಮತ್ತು ಇತರೆ ಇಲಾಖೆಗಳಲ್ಲಿ ಖಾಲಿ ಇರುವ ಪೊಸ್ಟಲ್ ಅಸಿಸ್ಟೆಂಟ್, ಸಾರಟಿಂಗ್ ಅಸಿಸ್ಟೆಂಟ್, ಡಾಟಾ ಎಂಟ್ರಿ ಆಪರೇಟರ್, ಎಲ್.ಡಿ.ಸಿ ಮುಂತಾದ ಹುದ್ದೆಗಳ ನೇಮಕಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿರುತ್ತಾರೆ.
ವಿದ್ಯಾರ್ಹತೆ: ಪಿ.ಯು.ಸಿ ಪರೀಕ್ಷೆಯಲ್ಲಿ ತೇರ್ಗಡೆ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವಯೋಮಿತಿ: 18 ರಿಂದ 27 ವರ್ಷಗಳು ಪರಿಶಿಷ್ಟ ಜಾತಿ/ಪಂಗಡ/ ಓಬಿಸಿ/ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ನಿಯಮಾನುಸಾರ ರಿಯಾಯಿತಿ ಇರುತ್ತದೆ. ವೇತನ ರೂ 32,000 ರಿಂದ 45,000 ವರೆಗೆ. ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ:15/12/2020. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.ssckkr.kar.nic.in & https://ssc.nic.in ನಲ್ಲಿ ಲಭ್ಯವಿರುವಮಾಹಿತಿಯನ್ನು ಪಡೆಯುವುದು.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ರವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08172-296374 ಅನ್ನು ಸಂಪರ್ಕಿಸಿ ಮಾಹಿತಿ ಮತ್ತು ಮಾರ್ಗದರ್ಶನವನ್ನು ಪಡೆದುಕೊಳ್ಳಲು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.