ಉತ್ತರ ಪ್ರದೇಶದಲ್ಲಿ ಎನ್ ಕೌಂಟರ್: ವಾಂಟೆಡ್ ಕ್ರಿಮಿನಲ್ ಹತ್ಯೆ - Mahanayaka
1:35 AM Thursday 12 - December 2024

ಉತ್ತರ ಪ್ರದೇಶದಲ್ಲಿ ಎನ್ ಕೌಂಟರ್: ವಾಂಟೆಡ್ ಕ್ರಿಮಿನಲ್ ಹತ್ಯೆ

13/10/2024

48 ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಮತ್ತು ತಲೆಗೆ 1.5 ಲಕ್ಷ ರೂ.ಗಳ ಬಹುಮಾನವನ್ನು ಹೊಂದಿದ್ದ ವ್ಯಕ್ತಿಯನ್ನು ಪೊಲೀಸರೊಂದಿಗಿನ ಎನ್ ಕೌಂಟರ್ ನಲ್ಲಿ ಭಾನುವಾರ ಕೊಲ್ಲಲಾಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನುಪ್ಶಹರ್‌ನ ಸರ್ಕಲ್ ಆಫೀಸರ್, ಪೊಲೀಸ್ ಠಾಣೆಯ ಪೊಲೀಸ್ ತಂಡವು ಬೈಕಲ್ಲಿ ಇಬ್ಬರು ಶಂಕಿತರನ್ನು ಹಿಂಬಾಲಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಪೊಲೀಸರನ್ನು ಗಮನಿಸಿದ ಶಂಕಿತರು ಪರಾರಿಯಾಗಲು ಪ್ರಯತ್ನಿಸಿ ಅಧಿಕಾರಿಗಳ ಮೇಲೆ ಗುಂಡು ಹಾರಿಸಿದ್ದಾರೆ.
“ನಂತರ ನಡೆದ ಗುಂಡಿನ ಚಕಮಕಿಯಲ್ಲಿ, ಅನುಮಾನಾಸ್ಪದ ವ್ಯಕ್ತಿಗಳಲ್ಲಿ ಓರ್ವ ಗಾಯಗೊಂಡರೆ, ಇನ್ನೋರ್ವ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾನೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮೃತ ಅಪರಾಧಿಯನ್ನು ರಾಜೇಶ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜೇಶ್ ವಿರುದ್ಧ ಬುಲಂದ್ ಶಹರ್ ಮತ್ತು ಅಲಿಗಢದ ಹಲವಾರು ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ ಮತ್ತು ದೈಹಿಕ ಹಾನಿ ಸೇರಿದಂತೆ 48 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ರಾಜೇಶ್ ಬಂಧನಕ್ಕೆ ಈ ಹಿಂದೆ 1.5 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಲಾಗಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ