ಗೃಹ ಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡುವವರನ್ನು ಪ್ರೋತ್ಸಾಹಿಸಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Lakshmi Hebbalkar
03/09/2024

ತುಮಕೂರು: ಗೃಹ ಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರೀಲ್ಸ್ ಮಾಡು ಮಹಿಳೆಯರನ್ನು ಪ್ರೋತ್ಸಾಹಿಸುವಂತೆ   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ.

ತುಮಕೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆ ಕುರಿತಂತೆ ರೀಲ್ಸ್ ಮಾಡುವ ಮಹಿಳೆಯರಿಗೆ ಪ್ರೋತ್ಸಾಹ  ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ಆಗಿರುವ ಪ್ರಯೋಜನ ಪ್ರತಿಯೊಬ್ಬರಿಗೂ ತಿಳಿಯಬೇಕು. ರೀಲ್ಸ್ ಮಾಡುವ ಮಹಿಳೆಯರಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (ಸಿಡಿಪಿಒ) ಪ್ರೋತ್ಸಾಹ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು.

ಕೌಟುಂಬಿಕ ದೌರ್ಜನ್ಯ.ಪ್ರಕರಣದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಇದೇ ವೇಳೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version