ಒತ್ತುವರಿ ತೆರವು ಕಾಂಗ್ರೆಸ್ ಸರ್ಕಾರದ ಸಾಧನೆ: ಬಿಜೆಪಿ ಮಂಡಲ ವಕ್ತಾರ ವಿನಯ್ ಆಕ್ರೋಶ
ಮೂಡಿಗೆರೆ: ಜಿಲ್ಲೆಯಲ್ಲಿ ಐದು ಜನ ಕಾಂಗ್ರೆಸ್ ಶಾಸಕರಿದ್ದರೂ, ಕಾಫಿ, ಕಾಳುಮೆಣಸು, ಅಡಿಕೆ, ತೆಂಗು ಸೇರಿದಂತೆ ಬಡ ರೈತನ ಫಸಲನ್ನ ಒತ್ತುವರಿ ಹೆಸರಲ್ಲಿ ನಾಶ ಮಾಡುವುದೇ ಕಾಂಗ್ರೆಸ್ ಸರಕಾರ ಸಾಧನೆ ಆಗಿದ್ದು. ಈಗ ಅರಣ್ಯ ಸಚಿವ ಈಶ್ವರ ಖಂಡ್ರೆ ಮೂಲಕ ಕಸ್ತೂರಿ ರಂಗನ್ ವರದಿ ಜಾರಿಗೆ ತರಲು ಹವಣಿಸುತ್ತಿದೆ ಎಂದು ಬಿಜೆಪಿ ಮಂಡಲ ವಕ್ತಾರ ವಿನಯ್ ಹಳೆಕೋಟೆ ದೂರಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಹಿಂದಿನಿಂದಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ “ಅರಣ್ಯ”, ಕಂದಾಯ, ಒತ್ತುವರಿ ಹೆಸರಿನಲ್ಲಿ ಹೊಟ್ಟೆಪಾಡಿಗಾಗಿ ಕೃಷಿ ಮಾಡಿಕೊಂಡಿರುವ ಎರಡು ಮೂರು ಎಕರೆ ಇರುವ ಬಡ ರೈತನ ಭೂಮಿಯನ್ನು ತೆರವುಗೊಳಿಸುತ್ತಿರುವುದು ಖಂಡನೆಯವಾಗಿದ್ದು, ಇದನ್ನು ಪ್ರಶ್ನಿಸಿದರೆ, “ಅರಣ್ಯ” ರಕ್ಷಣೆ, ಕೋರ್ಟ್ ಆದೇಶ ಎನ್ನುತ್ತಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಹಿಂಸಿಸದೆ ರೈತನ ಹಿತ ಕಾಯಲಾಗುತ್ತಿತ್ತು. ನಿಮ್ಮ ಸರಕಾರ ಬಂದಾಗಲೇ ಏಕೆ ಹೀಗಾಗುತ್ತದೆ ಎಂಬ ಪ್ರಶ್ನೆಗಳಿವೆ ಎಂದು ಅವರು ಹೇಳಿದರು.
ಈಗಿನ ಅರಣ್ಯ ಮಂತ್ರಿ ಈಶ್ವರ್ ಖಂಡ್ರೆ ಸೇರಿದಂತೆ ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ತೊಡಗಿದ್ದು, ರಾಜ್ಯದ ನಾಗರಿಕರು ಮತ್ತು ರೈತರ ಹಿತವನ್ನು ಕಡೆಗಣಿಸುತ್ತಿದೆ. ಕೂಡಲೇ ರಾಜ್ಯ ಸರ್ಕಾರ ರೈತರ ಹಿತ ಕಾಪಾಡಲಿ ಎಂದು ಅವರು ಒತ್ತಾಯಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: