1:18 AM Thursday 6 - November 2025

ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಅಳಿವಿನಂಚಿನಲ್ಲಿರುವ ಬ್ಯಾಂಬೋ ಪಿಟ್ ವೈಫರ್ ಹಾವು ಸೆರೆ

Bambo pit viper snake
07/10/2023

ಚಿಕ್ಕಮಗಳೂರು: ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವನ್ನು  ಕಾಫಿನಾಡ ಕಳಸದಲ್ಲಿ ಸೆರೆ ಹಿಡಿಯಲಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಇರುವ ಅಳಿವಿನಂಚಿನ ಉರಗವನ್ನು ರಕ್ಷಣೆ ಮಾಡಲಾಗಿದೆ.

ಕಾಫಿನಾಡ ಕಳಸದಲ್ಲಿ ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವನ್ನು ಸೆರೆ ಹಿಡಿಯಲಾಗಿದೆ. ಈ ಹಾವಿನ ವಿಶೇಷತೆ ಅಂದ್ರೆ, ತಲೆ ಮೇಲೆ ಬಿದ್ದ ನೀರನ್ನ ಹಾಗೇ ಹೀರಿಕೊಳ್ಳುವ ಅಪರೂಪದ ಉರಗ ಇದಾಗಿದೆ.

ಕಳಸ ತಾಲೂಕಿನ ಕಳಸೇಶ್ವರ ದೇವಸ್ಥಾನದ ಬಳಿಯ ಚಂದ್ರು ಭಟ್ ಮನೆಯ ಅಂಗಳದಲ್ಲಿ ಈ ಬ್ಯಾಂಬೋ ಪಿಟ್ ವೈಫರ್   ಸೆರೆಯಾಗಿದೆ. ಹೆಚ್ಚಾಗಿ ಬಿದಿರಿನ ಬಂಬಿನಲ್ಲಿ ವಾಸವಿರುವ  ಬ್ಯಾಂಬೋ ಪಿಟ್ ವೈಫರ್ ಕಚ್ಚುವ ಹಾವಾಗಿದೆ. ಆದ್ರೆ, ಈ ಹಾವು ಕಡಿದರೆ ಸಾಯುವುದಿಲ್ಲ, ಮತ್ತಿನಲ್ಲಿದ್ದು, ಜ್ಞಾನ ತಪ್ಪುತ್ತಾರೆ.

bambo pit viper snake

ಅಪರೂಪದ ಹಾವಿನ ಸೌಂದರ್ಯ ನೋಡಿ ಸ್ಥಳೀಯರು ಖುಷಿ ಪಟ್ಟರು. ಅಪರೂಪದ ಹಾವನ್ನ ಸೆರೆ ಹಿಡಿದ ರಿಜ್ವಾನ್ ಅವರು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

Exit mobile version