ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಕೋಲ್ಕತಾದಲ್ಲಿ ಮತ್ತೊಂದು ಹೇಯ ಕೃತ್ಯ

ಕೋಲ್ಕತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಆಕೆಯ ಸಹಪಾಠಿಯನ್ನು ಬಂಧಿಸಲಾಗಿದೆ.
ಕೋಲ್ಕತ್ತಾದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ಸಹಪಾಠಿಯನ್ನು ಆನಂದಪುರ ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಆನಂದಪುರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇನೆ. ಸಹಪಾಠಿಯೊಬ್ಬ ಮದ್ಯದಲ್ಲಿ ಮಾದಕ ದ್ರವ್ಯ ಬೆರೆಸಿ ಕುಡಿಸಿದ. ಇದಾದ ಕೆಲವೇ ಕ್ಷಣಗಳಲ್ಲಿ ನಾನು ಪ್ರಜ್ಞೆ ಕಳೆದುಕೊಂಡೆ. ಆ ನಂತರ ಅತ್ಯಾಚಾರ ಎಸಗಿದ್ದಾನೆ’ ಎಂದು ಯುವತಿ ದೂರಿನಲ್ಲಿ ಹೇಳಿದ್ದಾರೆ ಎನ್ನಲಾಗಿದೆ.
ಕೃತ್ಯದ ನಂತರ ಆರೋಪಿಯು ತಲೆಮರೆಸಿಕೊಂಡಿದ್ದ. ಆನಂದಪುರದಲ್ಲಿರುವ ತನ್ನ ಮನೆಗೆ ಬರುವ ಖಚಿತ ಮಾಹಿತಿ ಆಧರಿಸಿ ಬಂಧಿಸಲಾಗಿದೆ. ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಈತನನ್ನು ಅ. 22ರವರೆಗೆ ಪೊಲೀಸ್ ವಶಕ್ಕೆ ನ್ಯಾಯಾಲಯ ನೀಡಿದೆ’ ಎಂದು ಆನಂದಪುರ ಠಾಣೆ ಪೊಲೀಸರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD