ಇನ್ನೂ 10 ಮಂದಿಗೆ ದೃಷ್ಟಿ ನೀಡಲಿದೆ ಪುನೀತ್ ರಾಜ್ ಕುಮಾರ್ ಕಣ್ಣುಗಳು! - Mahanayaka
4:41 AM Wednesday 15 - October 2025

ಇನ್ನೂ 10 ಮಂದಿಗೆ ದೃಷ್ಟಿ ನೀಡಲಿದೆ ಪುನೀತ್ ರಾಜ್ ಕುಮಾರ್ ಕಣ್ಣುಗಳು!

puneeth rajkumar
13/11/2021

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ಬಳಿಕ ಅವರ ಕಣ್ಣುಗಳನ್ನು ದಾನ ಮಾಡಲಾಗಿತ್ತು. ಈಗಾಗಲೇ ನಾಲ್ಕು ಮಂದಿಗೆ ಪುನೀತ್ ಕಣ್ಣುಗಳು ದೃಷ್ಟಿ ನೀಡಿವೆ. ಆದರೆ ಇನ್ನೊಂದು ಸಂತಸದ ಸುದ್ದಿಯನ್ನು ಇದೇ ಸಂದರ್ಭದಲ್ಲಿ ವೈದ್ಯರು ಹಂಚಿಕೊಂಡಿದ್ದಾರೆ.


Provided by

ಪುನೀತ್ ಕಣ್ಣಿನಿಂದ ಇನ್ನು ಕೂಡ 10ಕ್ಕೂ ಅಧಿಕ ಮಂದಿಗೆ ದೃಷ್ಟಿ ನೀಡಲು ನಾರಾಯಣ ನೇತ್ರಾಲಯವು ವಿನೂತನ ಪ್ರಯತ್ನಕ್ಕೆ ಮುಂದಾಗಿದೆ. ಇದೇ ಮೊದಲ ಬಾರಿಗೆ  ಒಬ್ಬ ವ್ಯಕ್ತಿಯ ಕಾರ್ನಿಯಾ ಹಾಗೂ ಸ್ಟೆಮ್ ಸೆಲ್ ಎರಡನ್ನೂ ಬಳಸಿಕೊಂಡು ಅಂಧರಿಗೆ ದೃಷ್ಟಿ ನೀಡಲು ಮುಂದಾಗಿದೆ.

ಸ್ಟೆಮ್ ಸೆಲ್ ಗಳಿಂದ ಸ್ಟೆಮ್ ಸೆಲ್ ಥೆರಫಿ ನಡೆಸಿದರೆ, ದೃಷ್ಟಿ ಕಳೆದಕೊಂಡವವರಿಗೆ ಮತ್ತೆ ದೃಷ್ಟಿ ನೀಡಬಹುದಾಗಿದೆ. ರಾಜ್ಯದ ಮಟ್ಟಿಗೆ ಇದೊಂದು ಹೊಸ ದಾಖಲೆ ಕೂಡ ಆಗಲಿದೆ ಎನ್ನಲಾಗಿದೆ.  ಈಗಾಗಲೇ ನಾರಾಯಣ ನೇತ್ರಾಲಯದಲ್ಲಿ ಪುನೀತ್ ಕಣ್ಣಿನ ಸ್ಟೆಮ್ ಸೆಲ್ ಗಳು ಅಭಿವೃದ್ಧಿ ಮಾಡಲಾಗುತ್ತಿದ್ದು, ಸ್ಟೆಮ್ ಸೆಲ್ ಗಳು ಮಲ್ಟಿಪಲ್ ಆಗುತ್ತಿವೆ. ಇದಕ್ಕೆ ಸಮಯ ಹಿಡಿಯುತ್ತಿದೆ. ಪೂರ್ಣ ಪ್ರಮಾಣದಲ್ಲಿ ಸ್ಟೆಮ್ ಸೆಲ್ ಗಳು ಅಭಿವೃದ್ಧಿ ಹೊಂದಿದ ಬಳಿಕ ಸ್ಟೆಮ್ ಸ್ಟೆಲ್ ನಿಂದ ದೃಷ್ಟಿ ಕಳೆದುಕೊಂಡಿದ್ದ ಅಂಧರಿಗೆ ಕಸಿ ಮಾಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಸ್ಟೆಮ್ ಸೆಲ್ ಥೆರಫಿ ಅಂದರೆ, ಪಟಾಕಿ ಸಿಡಿತ ಹಾಗೂ ವಂಶವಾಹಿನಿಗಳಿಂದಾಗಿ ಹಲವು ಜನರಿಗೆ ಅಂಧತ್ವ ಇರುತ್ತದೆ ಅಂತಹವರಗೆ ಸ್ಟೆಮ್ ಸೆಲ್ ಅಳವಡಿಕೆ ಮಾಡುವುದರಿಂದ ದೃಷ್ಟಿ ನೀಡಲು ಸಾಧ್ಯವಿದೆ. ಈ ಪ್ರಕ್ರಿಯೆಗೆ ನಾರಾಯಣ ನೇತ್ರಾಲಯ ಇದೀಗ ಪ್ರಕ್ರಿಯೆಗೆ ಮುಂದಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ಕಡಬ: ರಾತ್ರಿ ವೇಳೆ ತೋಟಕ್ಕೆ ನುಗ್ಗಿ ಬೆಳೆ ಧ್ವಂಸಗೊಳಿಸಿದ ಕಾಡಾನೆ

ನನ್ನ ಸಾವಿಗೆ ಪಕ್ಷದ ಮುಖಂಡರೇ ಕಾರಣ ಎಂದು ಸ್ಟೇಟಸ್ ಹಾಕಿ ಕಾಂಗ್ರೆಸ್ ಸದಸ್ಯೆ ಆತ್ಮಹತ್ಯೆಗೆ ಯತ್ನ!

ಲೈಂಗಿಕ ಕಿರುಕುಳ ಆರೋಪದಿಂದ ನೊಂದು ಖಿನ್ನತೆಗೆ ಜಾರಿದ್ದ ವ್ಯಕ್ತಿ ಸಾವು!

ಪ್ಲೈಓವರ್ ನಲ್ಲಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ಹಾಲಿನ ವಾಹನ ಡಿಕ್ಕಿ: ಇಬ್ಬರು ಯುವಕರ ದಾರುಣ ಸಾವು

ಆಟೋ ಚಾಲಕನನ್ನು ಶೌಚಾಲಯಕ್ಕೆ ಎಳೆದೊಯ್ದು ವಿವಸ್ತ್ರಗೊಳಿಸಿ ವೈದ್ಯರ ತಂಡದಿಂದ ಹೇಯ ಕೃತ್ಯ!

KSRTC ಬಸ್ ನಲ್ಲಿ ಜೋರಾಗಿ ಹಾಡು ಹಾಕಿದರೆ ಶಿಸ್ತು ಕ್ರಮ: ಶಿಕ್ಷೆ ಏನು ಗೊತ್ತಾ?

 

ಇತ್ತೀಚಿನ ಸುದ್ದಿ