ಮಂಗಳೂರು: ಜುಲೈ 20ರಿಂದ ಮಹಿಳೆಯರಿಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ
ಮಂಗಳೂರು: ಸ್ವಂತ ಉದ್ಯೋಗವನ್ನು ಪ್ರಾರಂಭಿಸಿ ಸ್ವಾವಲಂಬಿ ಜೀವನ ನಡೆಸಲು ಬಯಸುವ ಮಹಿಳೆಯರಿಗಾಗಿ ಮಂಗಳೂರಿನಲ್ಲಿ ವಿಶೇಷ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ (ಬೆಂಗಳೂರು), ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್ — ಧಾರವಾಡ/ಮಂಗಳೂರು), ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ಕೌಶಲ ಮಿಷನ್ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ತರಬೇತಿಯ ವಿವರಗಳು:
ದಿನಾಂಕ: ಜುಲೈ 20 ರಿಂದ ಜುಲೈ 30ರವರೆಗೆ (10 ದಿನಗಳು)
ಸ್ಥಳ: ಭಾರತಿ ಟ್ರೈನಿಂಗ್ ಸೆಂಟರ್, ಕೊಟ್ಟಾರ, ಮಂಗಳೂರು.
ಅರ್ಹತೆಗಳು:
ವಯೋಮಿತಿ: 18 ರಿಂದ 45 ವರ್ಷಗಳು.
ವಿದ್ಯಾರ್ಹತೆ: ಕನಿಷ್ಠ 10ನೇ ತರಗತಿ ಪಾಸಾಗಿರಬೇಕು.
ಎಲ್ಲಾ ಜಾತಿಯ ಮಹಿಳಾ ಸ್ವ-ಉದ್ಯೋಗ ಆಕಾಂಕ್ಷಿಗಳಿಗೆ ಇಲ್ಲಿ ಮುಕ್ತ ಅವಕಾಶವಿದೆ.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮಹಿಳೆಯರು ಮಂಗಳೂರಿನ ಉರ್ವಮಾರ್ಕೆಟ್ ಕಟ್ಟಡದ 2ನೇ ಮಹಡಿಯಲ್ಲಿರುವ ಸಿಡಾಕ್ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.
ಅಗತ್ಯವಿರುವ ದಾಖಲೆಗಳು:
ಭರ್ತಿ ಮಾಡಿದ ಅರ್ಜಿ
3 ಪಾಸ್ಪೋರ್ಟ್ ಅಳತೆಯ ಫೋಟೊ
ಆಧಾರ್ ಕಾರ್ಡ್ನ ಪ್ರತಿ (ಜೆರಾಕ್ಸ್)
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಸಿಡಾಕ್ ಉಪ ನಿರ್ದೇಶಕರ ಕಚೇರಿ ಮೊಬೈಲ್ ಸಂಖ್ಯೆಗಳು: 9448812974, 9886035251, 8546894517
ಸ್ವಂತ ಉದ್ಯಮ ಆರಂಭಿಸುವ ಕನಸಿರುವ ಮಹಿಳೆಯರು ಈ ಸುವರ್ಣಾವಕಾಶದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಿಡಾಕ್ ಉಪ ನಿರ್ದೇಶಕರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























