ಆಸ್ಪತ್ರೆಯಿಂದ ತಪ್ಪಿಸಿಕೊಂಡು ಹೋಗಿದ್ದ ವ್ಯಕ್ತಿಯ ಮೃತದೇಹ ದೇವಳದ ಕೆರೆಯಲ್ಲಿ ಪತ್ತೆ - Mahanayaka
10:18 AM Wednesday 3 - September 2025

ಆಸ್ಪತ್ರೆಯಿಂದ ತಪ್ಪಿಸಿಕೊಂಡು ಹೋಗಿದ್ದ ವ್ಯಕ್ತಿಯ ಮೃತದೇಹ ದೇವಳದ ಕೆರೆಯಲ್ಲಿ ಪತ್ತೆ

drown water
06/11/2023


Provided by

ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯಿಂದ ತಪ್ಪಿಸಿಕೊಂಡು ಹೋಗಿ ಕೋಟೇಶ್ವರದ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.5ರಂದು ಸಂಜೆ ವೇಳೆ ನಡೆದಿದೆ.

ಕೋಟದ ನಿವಾಸಿ ಜಿ.ಸುರೇಂದ್ರ(70) ಮೃತ ದುದೈರ್ವಿ. ಅನಾರೋಗ್ಯದಿಂದ ನ.2ರಂದು ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಇವರು ನ.5ರಂದು ಬೆಳಗ್ಗೆ ಇವರು ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು.

ನ.5ರಂದು ಸಂಜೆ ಇವರ ಮೃತದೇಹವು ಕೋಟೇಶ್ವರ ದೇವಳದ ಕೆರೆಯಲ್ಲಿ ಪತ್ತೆಯಾಗಿದೆ. ಇವರು ವೈಯಕ್ತಿಕ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ