ಚುನಾವಣಾ ರಾಜಕೀಯದಿಂದ ಈಶ್ವರಪ್ಪ ನಿವೃತ್ತಿ: ಅನುಮಾನಕ್ಕೆ ಕಾರಣವಾದ ಈಶ್ವರಪ್ಪ ನಡೆ! - Mahanayaka
10:33 AM Wednesday 20 - August 2025

ಚುನಾವಣಾ ರಾಜಕೀಯದಿಂದ ಈಶ್ವರಪ್ಪ ನಿವೃತ್ತಿ: ಅನುಮಾನಕ್ಕೆ ಕಾರಣವಾದ ಈಶ್ವರಪ್ಪ ನಡೆ!

eshwarappa
11/04/2023


Provided by

ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಟಿಕೆಟ್ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಹೌದು.. ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್‌. ಈಶ್ವರಪ್ಪ ನಿವೃತ್ತರಾಗಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ– ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ ಎಂದಿದ್ದಾರೆ.

ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ–ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.

ಒಂದೆಡೆ ಈಶ್ವರಪ್ಪ ಅವರ ರಾಜಕೀಯ ನಿವೃತ್ತಿಯ ಬೆನ್ನಲ್ಲೇ ಟಿಕೆಟ್ ಸಿಗದ ನಿರಾಸೆಯಿಂದ ಅವರು ಟಿಕೆಟ್ ಘೋಷಣೆಯ ಕೊನೆಯ ಕ್ಷಣಗಳಲ್ಲಿ ರಾಜಕೀಯ ನಿವೃತ್ತಿ ಘೋಷಿಸಿದರೆ ಅನ್ನೋ ಅನುಮಾನ ಬಲವಾಗಿ ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ