3:57 PM Tuesday 18 - November 2025

ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆ ಅಧಿಕೃತ ಆದೇಶ: ಸಿಎಂ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸಿದ ಸಚಿವ ವಿ.ಸುನಿಲ್ ಕುಮಾರ್

v sunil kumar
20/02/2023

ಬೆಂಗಳೂರು: ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯದ ಹಿಂದುಳಿದ ಜಾತಿಗಳ ಪೈಕಿ‌ ಒಂದಾಗಿರುವ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಹಾಗೂ ಬ್ರಹ್ಮರ್ಷಿ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಸಾರಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕೆಂಬುದು ಸಮುದಾಯದ ಬಹುಕಾಲದ ಬೇಡಿಕೆಯಾಗಿತ್ತು. ಸಮುದಾಯದ ಈ ಬೇಡಿಕೆ ಈಡೇರಿಕೆಗಾಗಿ ಕೆಲ ದಿನಗಳ ಹಿಂದಷ್ಟೇ  ಸಚಿವ ವಿ ಸುನಿಲ್ ಕುಮಾರ್ ಅವರು , ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಸ್ವಾಮೀಜಿಗಳು ಮತ್ತು  ಸಮುದಾಯದ ಮುಖಂಡರ ಜತೆ ಭೇಟಿಯಾಗಿ ನಿಗಮ ಸ್ಥಾಪನೆಗೆ ಮನವಿ ಸಲ್ಲಿಸಿದ್ದರು. ಬಜೆಟ್ ನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಿಎಂ ಬೊಮ್ಮಾಯಿ ನೀಡಿದ ಭರವಸೆ ಈಗ ಕಾರ್ಯ ರೂಪಕ್ಕೆ ಬಂದಿದೆ.

ಈ ಸಂಬಂಧ ಮಾತನಾಡಿರುವ ಇಂಧನ ಮತ್ತು ಕನ್ನಡ ಸಂಸ್ಕ್ರತಿ ಸಚಿವ ವಿ.ಸುನೀಲ್ ಕುಮಾರ್, ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸ್ಪಂದಿಸುವ ಮೂಲಕ ಸರ್ಕಾರ ನುಡಿದಂತೆ ನಡೆದಿದೆ. ಇದಕ್ಕಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version