ಎಥೆನಾಲ್ ಮಿಶ್ರಣ: ನಿಮ್ಮ ವಾಹನಗಳ ಇಂಜಿನ್ ಸುರಕ್ಷಿತವೇ? | ಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಬೆನ್ನಲ್ಲೇ ವಾಹನ ಮಾಲಿಕರಿಗೆ ಹೆಚ್ಚಿದ ಆತಂಕ

ethanol
08/11/2026

ಬೆಂಗಳೂರು: ಪೆಟ್ರೋಲ್ ನಲ್ಲಿ ಎಥೆನಾಲ್ ಮಿಶ್ರಣ ಮಾಡುವ ವಿಚಾರ ಇದೀಗ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿದೆ. ಎಥೆನಾಲ್ ನಿಂದಾಗಿ ವಾಹನಗಳ ಇಂಜಿನ್ಗಳು ಹಾಳಾಗುತ್ತಿದ್ದು, ಇಡೀ ದೇಶವೇ ದೊಡ್ಡ ಸಮಸ್ಯೆಯನ್ನು ಎದುರಿಸುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಈ ಕುರಿತು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಪೆಟ್ರೋಲ್ ನಲ್ಲಿ ಮಿತಿಮೀರಿ ಎಥೆನಾಲ್ ಬೆರೆಸುತ್ತಿರುವುದರಿಂದ ರಾಜ್ಯದಲ್ಲಿ ಸಾವಿರಾರು ವಾಹನಗಳ ಇಂಜಿನ್ ಸಮಸ್ಯೆಗೆ ಈಡಾಗುತ್ತಿದ್ದು, ಮೈಲೇಜ್ ಕೂಡ ಗಣನೀಯವಾಗಿ ಕಡಿಮೆಯಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

“ಪೆಟ್ರೋಲ್ ನಲ್ಲಿ ಎಥೆನಾಲ್ ಮಿಶ್ರಣ ನಿಯಮಬಾಹಿರವಾಗಿ ನಡೆಯುತ್ತಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಕೇಂದ್ರಕ್ಕೂ ಮಾಹಿತಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಈ ಕುರಿತು ಶೀಘ್ರವೇ ಸಚಿವರು ಸುದ್ದಿಗೋಷ್ಠಿ ನಡೆಸಿ ಹೆಚ್ಚಿನ ವಿವರ ನೀಡಲಿದ್ದಾರೆ” ಎಂದು ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.

ಮುಂದುವರಿದು ಮಾತನಾಡಿದ ಅವರು, “ಪೆಟ್ರೋಲ್ ಬಂಕ್ ಗಳಲ್ಲಿ ನೇರವಾಗಿ ಮಿಶ್ರಣವಾಗುತ್ತಿಲ್ಲ, ಡಿಸ್ಟ್ರಿಬ್ಯೂಟರ್ಸ್ ಗಳ ಕಡೆಯಿಂದಲೇ ಈ ಅಕ್ರಮ ಎಥೆನಾಲ್ ಮಿಕ್ಸ್ ಆಗುತ್ತಿದೆ ಎಂಬ ಆರೋಪವಿದೆ. ಎಥೆನಾಲ್ ನಿಂದದ ಇಡೀ ದೇಶದ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದರೂ ವಿರೋಧ ಪಕ್ಷದ ನಾಯಕರು ಇದರ ಬಗ್ಗೆ ಚಕಾರವೆತ್ತುತ್ತಿಲ್ಲ” ಎಂದು ವಾಗ್ದಾಳಿ ನಡೆಸಿದರು.

“ಬೆಲೆ ಏರಿಕೆ ಬಗ್ಗೆ ಮಾತನಾಡುವ ವಿಪಕ್ಷಗಳು ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸುತ್ತಿರುವುದನ್ನು ಪ್ರಶ್ನಿಸುತ್ತಿಲ್ಲ. ನಾವು 5 ಗ್ಯಾರಂಟಿ ಯೋಜನೆಗಳನ್ನು ನೀಡಿ ಜನರಿಗೆ ನೆರವಾಗುತ್ತಿದ್ದೇವೆ. ಬರದಿಂದ ಸಂಕಷ್ಟಕ್ಕೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ತಲಾ 5,000 ರೂ. ಪರಿಹಾರ ನೀಡಲು ತೀರ್ಮಾನಿಸಿದ್ದೇವೆ, ಆದರೆ ಕೇಂದ್ರದಿಂದ ಒಂದು ರೂಪಾಯಿ ಪರಿಹಾರವೂ ಬಂದಿಲ್ಲ” ಎಂದು ಕಿಡಿಕಾರಿದರು.

ಅಲ್ಲದೆ, ಕಳೆದ 10 ವರ್ಷಗಳಿಂದ ಕಬ್ಬಿಗೆ ಬೆಂಬಲ ಬೆಲೆ ನಿಗದಿಪಡಿಸದ ಕೇಂದ್ರ ಸರ್ಕಾರಕ್ಕೆ ರೈತರ ಮೇಲೆ ಯಾವುದೇ ಕಾಳಜಿ ಇಲ್ಲ ಎಂದು ಅವರು ಆರೋಪಿಸಿದರು.

ತೈಲ ಕಂಪನಿಗಳ ಸ್ಪಷ್ಟನೆ

ರಾಜ್ಯ ಸರ್ಕಾರದ ಆರೋಪಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL), ಭಾರತ್ ಪೆಟ್ರೋಲಿಯಂ (BPCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ (HPCL) ಜಂಟಿ ಹೇಳಿಕೆ ಮೂಲಕ ತಳ್ಳಿಹಾಕಿವೆ.  ಕರ್ನಾಟಕ ಸೇರಿದಂತೆ ದೇಶಾದ್ಯಂತ ಪೂರೈಸಲಾಗುತ್ತಿರುವ ಇಂಧನವು ‘ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್’ (BIS) ನಿಗದಿಪಡಿಸಿರುವ ‘E20’ (ಶೇ. 20 ಎಥೆನಾಲ್ ಮಿಶ್ರಣ) ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿಯೇ ಇದೆ ಎಂದು ತೈಲ ಕಂಪನಿಗಳು ಸ್ಪಷ್ಟಪಡಿಸಿವೆ.

ಇತ್ತೀಚಿನ ಸುದ್ದಿ

deneme bonusu veren siteler gamdom giriş deneme bonusu veren siteler
Exit mobile version