ಒಂದು ನಿಮಿಷ ತಡವಾಗಿದ್ದರೂ ಉಳಿಯುತ್ತಿತ್ತು ಪ್ರಾಣ: ಮಳೆಗೆ ಚಿಕ್ಕಮಗಳೂರಿನಲ್ಲಿ ಮೊದಲ ಬಲಿ - Mahanayaka

ಒಂದು ನಿಮಿಷ ತಡವಾಗಿದ್ದರೂ ಉಳಿಯುತ್ತಿತ್ತು ಪ್ರಾಣ: ಮಳೆಗೆ ಚಿಕ್ಕಮಗಳೂರಿನಲ್ಲಿ ಮೊದಲ ಬಲಿ

chikkamagaluru
21/05/2023


Provided by

ಚಿಕ್ಕಮಗಳೂರು: 2023ರ ಮೊದಲ ಮಳೆಗೆ ಚಿಕ್ಕಮಗಳೂರಿನಲ್ಲಿ ಮೊದಲ ಬಲಿಯಾಗಿದ್ದು,  ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮರ ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಚಿಕ್ಕಹಳ್ಳ ಬಳಿ ನಡೆದಿದೆ.

ವೇಣುಗೋಪಾಲ್ (45) ಮೃತ ದುರ್ದೈವಿಯಾಗಿದ್ದು, ಇವರು ಚಿಕ್ಕಹಳ್ಳ ಗ್ರಾಮದಲ್ಲಿ ಹೋಂ ಸ್ಟೇ ನಡೆಸುತ್ತಿದ್ದರು. ಜೊತೆಗೆ ಮೂಡಿಗೆರೆಯಲ್ಲಿ ಬಳೆ ಅಂಗಡಿ ಕೂಡ ನಡೆಸುತ್ತಿದ್ದರು.

ಇವರ ಹೋಂ ಸ್ಟೇಯಿಂದ ಸ್ವಲ್ಪವೇ ದೂರದಲ್ಲಿ ಇವರು ಪ್ರಯಾಣಿಸುತ್ತಿದ್ದ ಸ್ಕೂಟರ್ ಮೇಲೆ ಮರ ಉರುಳಿ ಬಿದ್ದಿದೆ. ಒಂದು ನಿಮಿಷ ತಡವಾಗಿದ್ದರೂ ಅವರು ಸುರಕ್ಷಿತವಾಗಿ ಮನೆ ತಲುಪುತ್ತಿದ್ದರು. ಆದರೆ ಪ್ರಕೃತಿಯ ಆಟ ಬೇರೆನೇ ಇತ್ತು.

ಮೂಲತಃ ಉತ್ತರ ಕರ್ನಾಟಕ ಮೂಲದ ವೇಣುಗೋಪಾಲ್, ಮೂಡಿಗೆರೆಯಲ್ಲಿ ಮದುವೆಯಾಗಿ, ಇಲ್ಲೇ ವಾಸವಿದ್ದರು. ಇಂದು ಒಂದರ ಹಿಂದೊಂದರಂತೆ ಮೂರು ಮರಗಳು ಬಿದ್ದಿವೆ. ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಣುಗೋಪಾಲ್ ಮರ ಬೀಳುತ್ತಿದ್ದಂತೆಯೇ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಆಲ್ದೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ